ಮಂಗಳೂರು: ಲೋಕಾಯುಕ್ತ ಬೇಟೆ - ಲಂಚ ಪಡೆದು ಸಿಕ್ಕಿಬಿದ್ದ ಅಧಿಕಾರಿ.!
ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಪೊಲೀಸ್ ಬಲೆಗೆ

ಮಂಗಳೂರು: ನಗರದ ಬೋಂದೆಲ್ನಲ್ಲಿರುವ ಲೋಕೋಪಯೋಗಿ ಇಲಾಖೆಯಲ್ಲಿ ಕಿರಿಯ ಇಂಜಿನಿಯರ್ ರೊನಾಲ್ಡ್ ಲೋಬೋ ಗುತ್ತಿಗೆದಾರರೊಬ್ಬರಿಂದ ಲಂಚಕ್ಕೆ ಕೈಯೊಡ್ಡುವಾಗ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾರೆ. 

ಲೋಕೋಪಯೋಗಿ ಇಲಾಖೆಯ ಕ್ಲಾಸ್ 2 ದರ್ಜೆಯ ಗುತ್ರಿಗೆದಾರ ಪ್ರಭಾಕರ ನಾಯ್ಕ ಬೆಳ್ತಂಗಡಿ ತಾಲೂಕಿನ ಎರಡು ಗ್ರಾಮಗಳಲ್ಲಿ 45 ಲಕ್ಷ ರೂ. ವೆಚ್ಚದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲನಿಯ ಅಭಿವೃದ್ಧಿ ಕಾಮಗಾರಿ ಮಾಡಿಸಿದ್ದರು. ಈ ಬಗ್ಗೆ ವರದಿ ಮಾಡಲು ಲೋಕೋಪಯೋಗಿ ಇಲಾಖೆಗೆ ಅರ್ಜಿ ಸಲ್ಲಿಸಿದಾಗ ಇಲಾಖೆಯ ಗುಣಮಟ್ಟ ಮತ್ತು ಭರವಸೆ ವಿಭಾಗದ ಇಂಜಿನಿಯರ್ ರೊನಾಲ್ಡ್ ಲೋಬೋ 22 ಸಾವಿರ ರೂ. ಲಂಚ ಕೇಳಿದ್ದರೆನ್ನಲಾಗಿದೆ. 

ಆದರೆ ಲಂಚ ಕೊಡಲು ನಿರಾಕರಿಸಿದ ಪ್ರಭಾಕರ ನಾಯ್ಕ ನೇರ ಲೋಕಾಯುಕ್ತ ಪೊಲೀಸ್ಗೆ ದೂರು ನೀಡಿದ್ದರು. ಲೋಕಾಯುಕ್ತ ಎಸ್ಪಿ ಸಿ.ಎ.ಸೈಮನ್ ಮಾರ್ಗದರ್ಶನದಂತೆ ಬುಧವಾರ ಲಂಚದ ಹಣ ಸ್ವೀಕರಿಸುವ ವೇಳೆ ದಾಳಿ ನಡೆಸಿ ರೊನಾಲ್ಡ್ ಲೋಬೋನನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತದ ಪ್ರಕಟನೆ ತಿಳಿಸಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!