ಮಂಗಳೂರು: ಮಾದಕ ವಸ್ತು ಮಾರಾಟ - ಓರ್ವ ಅರೆಸ್ಟ್
ಮಂಗಳೂರು: ಮಾದಕ ವಸ್ತು ಮಾರಾಟ - ಓರ್ವ ಅರೆಸ್ಟ್

ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ  ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ನರಿಂಗಾನದ ತೌಡುಗೋಳಿ ನಿವಾಸಿ ಅಬ್ದುಲ್ ಅಝೀಝ್ ಯಾನೆ ಪೋಕರ್ ಅಝೀಝ್‌ (42) ಬಂಧಿತ ಆರೋಪಿ.

ಈ ಹಿಂದೆ ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದ ಅಝೀಝ್ ಮಂಗಳೂರು ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ದೇರಳಕಟ್ಟೆಯ ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ  ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.

ಈತನಿಂದ ಒಟ್ಟು 26 ಗ್ರಾಂ ತೂಕದ ರೂ. 1,30,000 ಮೌಲ್ಯದ ಮಾದಕ ವಸ್ತು ಎಂಡಿಎಂಎ ಇದರ ಸಾಗಾಟಕ್ಕೆ ಉಪಯೋಗಿಸಿದ ಕಾರು, 2 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 6,41,500 ರೂ. ಎಂದು ಅಂದಾಜಿಸಲಾಗಿದೆ. 

ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ವಿರುದ್ದ ಈ ಹಿಂದೆ ಉಳ್ಳಾಲ, ಕೊಣಾಜೆ ಮತ್ತು ಕಾವೂರು ಪೊಲೀಸ್ ಠಾಣೆಗಳಲ್ಲಿ ಒಟ್ಟು 7 ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿರುತ್ತದೆ. 

ಈತನು ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ಸಮಯ ಅಲ್ಲಿಯ ಕಾರಾಗೃಹ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣ ದಾಖಲಾಗಿರುತ್ತದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!