"ಕೈಯಲ್ಲಿ ಬಿಯರ್, ವಿಶ್ವಕಪ್ ಮೇಲೆ ಕಾಲು"  ಕ್ರಿಕೆಟ್‌ ಪ್ರೇಮಿಗಳು ಗರಂ.!
ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಮಿಚೆಲ್ ಮಾರ್ಷ್

ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾ ತಂಡವು ಭಾರತ ತಂಡವನ್ನು ಮಣಿಸುವ ಮೂಲಕ ವಿಶ್ವಕಪ್‌ ಗೆದ್ದು, ಕ್ರಿಕೆಟ್‌ ಜಗತ್ತಿನಲ್ಲಿ ಬಲಿಷ್ಠ ತಂಡವಾಗಿ ಹೊರ ಹೊಮ್ಮಿದೆ. ಈ ಎಲ್ಲದರ ನಡುವೆಯೇ ವಿಶ್ವಕಪ್‌ ಗೆದ್ದ ಆಸ್ಟ್ರೇಲಿಯಾ ತಂಡದ ಆಟಗಾರನೋರ್ವನ ವಿರುದ್ಧ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಮಿಚೆಲ್ ಮಾರ್ಷ್ ಅವರು ಕೈಯಲ್ಲಿ ಬಿಯರ್ ಬಾಟಲ್ ಹಿಡಿದುಕೊಂಡು, ವಿಶ್ವಕಪ್ ಟ್ರೋಫಿಯ ಮೇಲೆ ಎರಡೂ ಕಾಲುಗಳನ್ನು ಇಟ್ಟು ಸೋಫ ಮೇಲೆ ವಿಶ್ರಾಂತಿ ಮಾಡುವುದನ್ನು ಕಾಣಬಹುದು. ಈ ಫೋಟೋವನ್ನು ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಮಾರ್ಷ್ ಅವರ ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಅನೇಕ ಮಂದಿ ಮಾರ್ಷ್ ನಡೆಗೆ ಕಿಡಿ ಕಾರಿದ್ದು, ಟ್ರೋಫಿಗೆ ಈರೀತಿ ‘ಅಗೌರವ’ ತೋರುವುದು ಸರಿಯಲ್ಲ ಎಂದಿದ್ದಾರೆ. ಅಲ್ಲದೆ ಸಚಿನ್ ತೆಂಡೂಲ್ಕರ್ ಟ್ರೋಫಿಗೆ ಗೌರವ ನೀಡುವ ಫೋಟೋ ಹಂಚಿಕೊಂಡು ಮಾರ್ಷ್​ಗೆ ತಿರುಗೇಟು ನೀಡುತ್ತಿದ್ದಾರೆ.

ಆಸ್ಟ್ರೇಲಿಯಾ ವಿಶ್ವಕಪ್ ಟ್ರೋಫಿ ವಶಪಡಿಸಿಕೊಂಡ ಕೆಲವೇ ಗಂಟೆಗಳ ನಂತರ ಈ ಫೋಟೋವನ್ನು ಹಂಚಿಕೊಳ್ಳಲಾಗಿದೆ. ಭಾನುವಾರ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆತಿಥೇಯ ಭಾರತ ವಿರುದ್ಧ ಗೆದ್ದು ಹೋಟೆಲ್​ಗೆ ತೆರಳಿದ ಬಳಿಕ ಈ ಫೋಟೋ ತೆಗೆಯಲಾಗಿದೆ ಎನ್ನಲಾಗಿದೆ. ಮಾರ್ಷ್ ಅವರು ತಮ್ಮ ಚಿನ್ನದ ಪದಕವನ್ನು ತೋರಿಸುವ ಜೊತೆಗೆ ಎರಡೂ ಕಾಲುಗಳನ್ನು ಟ್ರೋಫಿಯ ಮೇಲೆ ಇಟ್ಟಿದ್ದಾರೆ.

2023 ಕ್ರಿಕೆಟ್ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಭಾರತವನ್ನು ಸೋಲಿಸಿ ಆರನೇ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅರ್ಧಶತಕಗಳ ಕೊಡುಗೆಯೊಂದಿಗೆ ಭಾರತ 240 ರನ್ ಗಳಿಸಿತು. ಆದಾಗ್ಯೂ, ಆಸ್ಟ್ರೇಲಿಯಾ ಟ್ರಾವಿಸ್ ಹೆಡ್ (137 ರನ್ಸ್) ಆಕರ್ಷಕ ಶತಕ, ತಂಡ ಗೆಲುವು ಸಾಧಿಸುವಂತೆ ಮಾಡಿತು. ಆಸ್ಟ್ರೇಲಿಯಾ ಇನ್ನೂ 42 ಎಸೆತಗಳು ಬಾಕಿ ಇರುವಂತೆಯೇ ಆರು ವಿಕೆಟ್‌ಗಳಿಂದ ಸುಲಭ ಜಯ ಸಾಧಿಸಿತು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!