ಮಂಗಳೂರು: ಆಲ್ ಇಂಡಿಯಾ ಯುನಿವರ್ಸಿಟಿ ಕಬ್ಬಡಿ ಚಾಂಪಿಯನ್‌ಶಿಪ್ ತಮ್ಮದಾಗಿಸಿಕೊಂಡ ತಂಡಕ್ಕೆ ಸನ್ಮಾನ ಕಾರ್ಯಕ್ರಮ
ಮಂಗಳೂರು ವಿಶ್ವವಿದ್ಯಾನಿಲಯವು ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷರ ಕಬಡ್ಡಿ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ದಕ್ಷಿಣ ಕನ್ನಡ ಅಮೆಚೂರು ಕಬ್ಬಡಿ ಅಸೋಸಿಯೇಷನ್ ನಿಂದ 33 ವರ್ಷಗಳ ನಂತರ ಆಲ್ ಇಂಡಿಯಾ ಯುನಿವರ್ಸಿಟಿ ಕಬ್ಬಡಿ ಚಾಂಪಿಯನ್ ಶಿಪ್ ಗೆದ್ದುಕೊಂಡ ಆಳ್ವಾಸ್ ವಿದ್ಯಾ ಸಂಸ್ಥೆ ಹಾಗೂ ಉಜಿರೆ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಮಂಗಳೂರಿನ ಕುಡ್ಲ ಹೋಟೆಲ್ ನ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. 

ಈ ಸಂದರ್ಭದಲ್ಲಿ ಆಳ್ವಾಸ್ ವಿದ್ಯಾಸಂಸ್ಥೆಯ ನಿರ್ದೇಶಕ ಮೋಹನ್ ಆಳ್ವ ರವರು 12 ಆಟಗಾರರಿಗೆ ತಲಾ 5 ಸಾವಿರದಂತೆ ಪ್ರೋತ್ಸಾಹ ಧನವನ್ನು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಅಮರನಾಥ್ ರೈ, ಅಧ್ಯಕ್ಷ ರಾಕೇಶ್ ಮಲ್ಲಿ ಪದಾಧಿಕಾರಿಗಳು ಉಪಸ್ಥಿತರಿದ್ದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!