ಕಿನ್ನಿಗೋಳಿ: ವಾಲಿಬಾಲ್ ಟೂರ್ನಮೆಂಟ್‌ನಲ್ಲಿ ಸೈಂಟ್ ಮೇರಿಸ್ ಸೆಂಟ್ರಲ್ ಸ್ಕೂಲ್ ಪ್ರಥಮ
ಸೈಂಟ್ ಮೇರಿಸ್ ಸೆಂಟ್ರಲ್ ಸ್ಕೂಲ್ ಬಾಲಕರ ವಾಲಿಬಾಲ್ ತಂಡಕ್ಕೆ ಪ್ರಥಮ ಸ್ಥಾನ

ಮಂಗಳೂರು : ಕಿನ್ನಿಗೋಳಿ ಸೈಂಟ್ ಮೇರಿಸ್ ಸೆಂಟ್ರಲ್ ಸ್ಕೂಲ್ ಬಾಲಕರ ವಾಲಿಬಾಲ್ ತಂಡವು 14ರ ವಯೋಮಿತಿಯ ಬಾಲಕರ ವಾಲಿಬಾಲ್ ಟೂರ್ನಮೆಂಟ್‌ನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.   

ಡಿಸೆಂಬರ್ 6ರಂದು ಮಂಗಳೂರಿನ ಮಂಗಳ ಸ್ಟೇಡಿಯಂ ಕ್ರೀಡಾಂಗಣದಲ್ಲಿ, ಮಂಗಳೂರು ತಾಲೂಕಿನ ವಾಲಿಬಾಲ್ ಅಸೋಸಿಯೇಶನ್ ನೇತ್ರತ್ವದಲ್ಲಿ ನಡೆದ 14ರ ವಯೋಮಿತಿಯ ಬಾಲಕರ ವಾಲಿಬಾಲ್ ಟೂರ್ನಮೆಂಟ್‌ನಲ್ಲಿ ಕಿನ್ನಿಗೋಳಿ ಸೈಂಟ್ ಮೇರಿಸ್ ಸೆಂಟ್ರಲ್ ಸ್ಕೂಲ್ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಪ್ರಶಸ್ತಿ ಗೆದ್ದುಕೊಂಡಿದೆ.  ಈ ಪಂದ್ಯಾಟದಲ್ಲಿ ಮಂಗಳೂರು ತಾಲೂಕಿನ 18 ತಂಡಗಳು ಭಾಗವಹಿಸಿದ್ದವು.

ರಬೇತುದಾರ ಶಿಕ್ಷಕರಿಗೆ ಹಾಗೂ ವಿಜೇತ ತಂಡಕ್ಕೆ ಸೈಂಟ್ ಮೇರಿಸ್ ಸೆಂಟ್ರಲ್ ಸ್ಕೂಲ್ ಸಂಚಾಲಕರು, ಪ್ರಾಂಶುಪಾಲರು, ಹಾಗೂ ಆಡಳಿತ ಮಂಡಳಿ ಅಭಿನಂದನೆಗಳು ಸಲ್ಲಿಸಿದರು. 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!