ಕುಡುಪು ಜಾತ್ರಾ ಮಹೋತ್ಸವದಲ್ಲಿ ಹಿಂದೂಯೇತರ  ವ್ಯಾಪಾರಿಗಳಿಗಿಲ್ಲ ಅವಕಾಶ.!
ದೇವಸ್ಥಾನದ ಮಂಡಳಿ ನಿರ್ಧಾರಕ್ಕೆ ಸ್ವಾಗತ; ಶರಣ್ ಪಂಪ್ ವೆಲ್

ಮಂಗಳೂರು: ಕರಾವಳಿಯಲ್ಲಿ ಕೆಲವು ವರ್ಷಗಳಿಂದ "ವ್ಯಾಪರ ಧರ್ಮ ದಂಗಲ್" ಪ್ರಾರಂಭವಾಗಿದ್ದು, ಅನ್ಯಮತೀಯರಿಗೆ ದೇವಸ್ಥಾನಗಳಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎನ್ನುವ ಕೂಗು ಕೇಳುತ್ತಿದ್ದಂತೆ ಹಲವು ದೇವಸ್ಥಾನಗಳಲ್ಲಿ ಅವಕಾಶಕ್ಕೆ ಆಡಳಿತ ಮಂಡಳಿ ನಿರ್ಧಾರಿಸಿದ ನಂತರ ಪರ-ವಿರೋಧಗಳು ವ್ಯಕ್ತವಾಗಿತ್ತು. ಸದ್ಯ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಷಷ್ಟಿ ಮಹೋತ್ಸವದ ಜಾತ್ರೆ ವ್ಯಾಪಾರದಲ್ಲಿ ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದೆ.

ಡಿ.14ರಿಂದ 19ವರೆಗೆ ಇಲ್ಲಿ ಜಾತ್ರೆ ನಡೆಯಲಿದ್ದು, ಈ ಜಾತ್ರೆ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ದೇವಸ್ಥಾನದ ಮಂಡಳಿ ನಿರ್ಧಾರಿಸಿದೆ. ಈ ನಿರ್ಧಾರಕ್ಕೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಸ್ವಾಗತಿಸಿದ್ದಾರೆ.

ಆಡಳಿತ ಮಂಡಳಿಯ ಈ ನಿರ್ಧಾರಕ್ಕೆ ಪರ-ವಿರೋಧಗಳು ವ್ಯಕ್ತವಾಗಿದ್ದು. ವ್ಯಾಪಾರಿಗಳು DYFI ನೇತೃತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗೆ ದೂರು ನೀಡಲು ಸಜ್ಜಾಗಿದ್ದಾರೆ ಎಂದು ತಿಳಿದು ಬಂದಿದೆ. 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!