ಸುರತ್ಕಲ್: ರಸ್ತೆ ದಾಟುವಾಗ ಕಾರು ಡಿಕ್ಕಿಯಾಗಿ ವಿದ್ಯಾರ್ಥಿನಿ ಗಂಭೀರ.!!
ಭೀಕರ ಅಪಘಾತ - ವಿದ್ಯಾರ್ಥಿನಿ ಗಂಭೀರ

ಸುರತ್ಕಲ್: ರಸ್ತೆ ದಾಟುತ್ತಿದ್ದ ವೇಳೆ ರಾಂಗ್ ಸೈಡ್‌ನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಜಂಕ್ಷನ್ ಬಳಿ ನಡೆದಿದೆ.

ಘಟನೆಯಲ್ಲಿ ಗಾಯಗೊಂಡವರು ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿಯರು ಎಂದು ತಿಳಿದು ಬಂದಿದೆ. ಒಬ್ಬಳು ವಿದ್ಯಾರ್ಥಿನಿಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಬ್ಬಳಿಗೆ ಗಾಯಗಲಾಗಿದೆ. ಸ್ಥಳಕ್ಕೆ ಅಗಮಿಸಿದ ಸುರತ್ಕಲ್ ಪೊಲೀಸರು ಪರೀಶಿಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಾಯಗೊಂಡವರನ್ನು ಕೇರಳ‌ ಕಣ್ಣೂರು ನಿವಾಸಿ ಮಯೂರ (19), ಕಾಸರಗೋಡು ನಿವಾಸಿ ಭಾವನಾ (19) ಎಂದು ಗುರುತಿಸಲಾಗಿದೆ. 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!