"ಇನ್ನೂ ಪತ್ತೆಯಾಗದ ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಗಳು" - ವಾಂಟೆಡ್‌ ಲಿಸ್ಟ್ ಬಿಡುಗಡೆ
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಐವರು ಸೇರಿ 24 ಆರೋಪಿಗಳ ವಾಂಟೆಡ್‌ ಲಿಸ್ಟ್ ಬಿಡುಗಡೆ ಪ್ರಕಟಿಸಿದ NIA

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ  ಐವರು ಆರೋಪಿಗಳು ಇನ್ನೂ ನಾಪತ್ತೆಯಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಸೇರಿ 24 ವಾಂಟೆಡ್ ಆರೋಪಿಗಳ ಪಟ್ಟಿಯನ್ನು ರಾಷ್ಟ್ರೀಯ ತನಿಖಾ ದಳ ಬಿಡುಗಡೆ ಮಾಡಿದೆ. ಈ ಎಲ್ಲಾ ಆರೋಪಿಗಳು ನಿಷೇಧಿತ ಪಿಎಫ್ಐ ಪ್ರಕರಣಗಳು, ಕೊಲೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದವರಾಗಿದ್ದಾರೆ.

ಎನ್ಐಎ ವಾಂಟೆಡ್‌ ಲಿಸ್ಟ್ ನಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಐವರು ದುಷ್ಕರ್ಮಿಗಳ ಹೆಸರು ಪ್ರಕಟಗೊಂಡಿದ್ದು, ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ವಾಂಟೆಡ್‌ ಲಿಸ್ಟ್ ಅನ್ನು ಎನ್‌ಐಎ ಬಿಡುಗಡೆಗೊಳಿಸಿದೆ. ಎನ್‌ಐಎ ಪಟ್ಟಿಯಲ್ಲಿ ಬಿಡುಗಡೆಗೊಂಡಿರುವ ಈ ಎಲ್ಲಾ ಆರೋಪಿಗಳು ನಿಷೇಧಿತ ಪಿಎಫ್ಐ ಸಂಘಟನೆಯ ಪ್ರಕರಣಗಳು, ಕೊಲೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದವರಾಗಿದ್ದಾರೆ.

ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಹುಡುಕಾಟದಲ್ಲಿರುವ ಎನ್​ಐಎ, ಇದೀಗ 24 ಆರೋಪಿಗಳ ಹೆಸರುಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಐವರು ಆರೋಪಿಗಳು ಸೇರಿದ್ದಾರೆ. ಈ ಎಲ್ಲಾ ಆರೋಪಿಗಳ ಸುಳಿವು ಸಿಕ್ಕಲ್ಲಿ ತಿಳಿಸುವಂತೆ ಮನವಿ ಮಾಡಲಾಗಿದೆ.

ಕೇರಳದ 11 ಆರೋಪಿಗಳು, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಮೂವರು, ಕರ್ನಾಟಕ ಹಾಗೂ ತಮಿಳುನಾಡಿನ ಐವರು ಆರೋಪಿಗಳ ಹೆಸರು ಪ್ರಕಟಿಸಲಾಗಿದೆ. ಆರೋಪಿಗಳ ಹೆಸರು, ಭಾವಚಿತ್ರ, ವಿಳಾಸ ಸಹಿತ ಮಾಹಿತಿ ಪ್ರಕಟಿಸಿ ಸುಳಿವು ಸಿಕ್ಕಲ್ಲಿ ಎನ್ಐಎಗೆ ವಾಟ್ಸ್​​ಆ್ಯಪ್ ಅಥವಾ ದೂರವಾಣಿ ಕರೆ ಮೂಲಕ ಮಾಹಿತಿ ನೀಡುವಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ‌ ಮಾಡಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಬೆಳ್ಳಾರೆ ಮುಸ್ತಫಾ, ಮಸೂದ್ ಅಗ್ನಾಡಿ, ಮೊಹಮ್ಮದ್ ಶರೀಫ್ ಕೊಡಾಜೆ, ಉಮ್ಮರ್ ಅಲಿಯಾಸ್ ಉಮರ್ ಫಾರೂಕ್, ಅಬೂಬ್ಬಕ್ಕರ್ ಸಿದ್ದಿಕ್ ಎಂಬ ಐವರ ಹೆಸರುಗಳನ್ನು ಪ್ರಕಟಿಸಲಾಗಿದೆ. ಕುಂಭಕೋಣಂ ರಾಮಲಿಂಗಂ ಕೊಲೆ ಕೇಸ್​ನಲ್ಲಿ ಭಾಗಿಯಾಗಿದ್ದ ತಮಿಳುನಾಡಿನ ಐವರು ಹಾಗೂ ಪಾಲಕ್ಕಾಡ್ ಶ್ರೀನಿವಾಸ್ ಕೇಸ್​ನಲ್ಲಿ ಭಾಗಿಯಾಗಿದ್ದ ಕೇರಳದ ಅಬ್ದುಲ್ ವಹಾಬ್, ಅಬ್ದುಲ್ ರಷೀದ್‌, ಆಯೂಬ್ ಸೇರಿ ನಾಲ್ವರು ಆರೋಪಿಗಳ ಹೆಸರು ಪ್ರಕಟಿಸಲಾಗಿದೆ. ನಿಷೇಧಿತ ಪಿಎಫ್ಐಗೆ ನೇಮಕ, ಒಳಸಂಚು, ಸರ್ಕಾರದ ವಿರುದ್ಧ ಪಿತೂರಿ, ದೇಶದ ಸಮಗ್ರತೆ, ಏಕತೆಗೆ ಧಕ್ಕೆ ತರಲು ಆರೋಪಿಗಳು ಯತ್ನಿಸಿದ ಆರೋಪ ಇವರ ಮೇಲಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಗಳ ಮಾಹಿತಿಗಳನ್ನು ಎನ್​ಐಎ ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!