ಪುತ್ತೂರು: ವಿಷಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಮೃತ್ಯು
ಪುತ್ತೂರು: ವಿಷ ಪದಾರ್ಥ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಆರ್ಯಾಪು ಗ್ರಾಮದ ಕಾರ್ಪಾಡಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ನೈತ್ತಾಡಿ ಕಲ್ಲುಗುಡ್ಡೆ ಸೆಲೂನ್ ಮಾಲಕ ರತ್ನಾಕರ ಭಂಡಾರಿ ಎಂದು ಗುರುತಿಸಲಾಗಿದೆ.
ಡಿ. 28ರಂದು ಸೆಲೂನಿಗೆ ಬಂದಿದ್ದ ಅವರು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ.
Comments
0 comment