ಪುತ್ತೂರು ನಗರಸಭಾ ಚುನಾವಣೆ; ಬಿಜೆಪಿ, ಕಾಂಗ್ರೆಸ್ ಜಯಭೇರಿ
ಪುತ್ತೂರು ನಗರಸಭಾ ಉಪ ಚುನಾವಣೆ
ಬಿಜೆಪಿ, ಕಾಂಗ್ರೆಸ್ ಗೆಲುವು - ಪುತ್ತಿಲ ಪರಿವಾರಕ್ಕೆ ಶಾಕ್ ಕೊಟ್ಟ ಮತದಾರರು.!

ಪುತ್ತೂರು: ನಗರ ಸಭಾ ತೆರವಾದ ಎರಡು ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ವಾರ್ಡ್ -11 ಬಿಜೆಪಿಯ ರಮೇಶ್ ರೈ ಹಾಗೂ ವಾರ್ಡ್ 1ರಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ ಜಯಭೇರಿ ಭಾರಿಸಿದ್ದಾರೆ.

ವಾರ್ಡ್ 11 ರಲ್ಲಿ ಚಲಾವಣೆಯಾದ ಒಟ್ಟು 1053 ಮತಗಳಲ್ಲಿ ಬಿಜೆಪಿಯ ರಮೇಶ್ ರೈ 431, ಕಾಂಗ್ರೆಸ್ ನ ದಾಮೋದರ ಭಂಡಾರ್ ಕರ್ 400, ಪುತ್ತಿಲ ಪರಿವಾರದ ಚಿಂತನ್ 216 ಮತಗಳನ್ನು ಪಡೆದು ಕೊಂಡಿದ್ದಾರೆ. 6ಮತ ನೋಟ ಕ್ಕೆ ಚಲಾವಣೆಯಾಗಿದೆ. ಬಿಜೆಪಿ ರಮೇಶ್ ರೈ 31 ಮತಗಳ ಅಂತದಲ್ಲಿ ಜಯಗಳಿಸಿದ್ದಾರೆ.

ವಾರ್ಡ್ 1ರಲ್ಲಿ ಚಲಾವಣೆಯಾದ ಒಟ್ಟು 958 ಮತಗಳಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ 427, ಬಿಜೆಪಿಯ ಸುನೀತಾ 219 ಹಾಗೂ ಪುತ್ತಿಲ ಪರಿವಾರದ ಅನ್ನಪೂರ್ಣ 308 ಮತಗಳನ್ನು ಪಡೆದುಕೊಂಡಿದ್ದಾರೆ. 4 ಮತ ನೋಟಕ್ಕೆ ಚಲಾವಣೆಯಾಗಿದೆ. ಕಾಂಗ್ರೆಸ್ ನ ದಿನೇಶ್ ಶೇವಿರೆ 119 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!