ಮಂಗಳೂರು: ಪಶ್ಚಿಮ ವಲಯಕ್ಕೆ ಹೊಸ ಡಿಐಜಿ ಅಧಿಕಾರ ಸ್ವೀಕಾರ
ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ

ಮಂಗಳೂರು : ಪಶ್ಚಿಮ ವಲಯ ನೂತನ ಡಿಐಜಿಯಾಗಿ ಅಮಿತ್ ಸಿಂಗ್ ಅವರು ಇಂದು ಅಧಿಕಾರ ಸ್ವೀಕರಿಸಿದರು.

ಈವರೆಗೂ ಡಿಐಜಿಯಾಗಿದ್ದ ಚಂದ್ರ ಗುಪ್ತ ಅವರ ವರ್ಗಾವಣೆ ಹಿನ್ನೆಲೆಯಲ್ಲಿ ಅಮಿತ್ ಸಿಂಗ್ ಅವರನ್ನು ಸರ್ಕಾರ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿತ್ತು. ಕರಾವಳಿ ಜಿಲ್ಲೆಗಳನ್ನೊಳಗೊಂಡ ಪಶ್ಚಿಮ ವಲಯ ಡಿಐಜಿಯಾಗಿ ಅಮಿತ್ ಸಿಂಗ್ ಅಧಿಕಾರ ವಹಿಸಿಕೊಂಡಿದ್ದಾರೆ.

ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಡ್ರಗ್ಸ್, ಕೋಮುವಾದ ಸಹಿತ ಕಾನೂನು ಬಾಹಿರ ಕೃತ್ಯಗಳನ್ನು ಸಹಿಸುವುದಿಲ್ಲ. ಸೈಬರ್ ಕ್ರೈಂ ಬಗ್ಗೆ ಯೂ ಹೆಚ್ಚಿನ ನಿಗಾ ವಹಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್, ಉಡುಪಿ ಪೊಲೀಸ್ ವರಿಷ್ಠ ಡಾ. ಅರುಣ್ ಕುಮಾರ್ ಉಪಸ್ಥಿತಿ


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!