ಅಯೋಧ್ಯೆಯ 'ರಾಮಲಲ್ಲಾ' ವಿಗ್ರಹದ ಸೃಷ್ಟಿಕರ್ತ ಮೈಸೂರಿನ ಅರುಣ್ ಯೋಗಿರಾಜ್
ಯಾರು ಈ ಕಲಾವಿದ.! ಈತನ ಹಿನ್ನಲೆ ಏನು.? ಹೇಗಿದೆ ವಿಗ್ರಹ.?

ನಿಜಕ್ಕೂ ಕರ್ನಾಟಕಕ್ಕೆ ಇದೊಂದು ಹೆಮ್ಮೆಯ ವಿಚಾರ. ಅಯೋಧ್ಯೆಯಲ್ಲಿ ಜ. 22ರಂದು ಲೋಕಾರ್ಪಣೆಗೊಳ್ಳಲಿರುವ ಶ್ರೀರಾಮ ಮಂದಿರದ ಪ್ರಮುಖ ಆಕರ್ಷಣೆಯಾಗಲಿರುವ ಶ್ರೀರಾಮನ ವಿಗ್ರಹವನ್ನು ಕೆತ್ತಿರುವುದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್.

ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಮ ಮಂದಿರ ಇದೇ ಜನವರಿ 22ರಂದು ಉದ್ಘಾಟನೆಯಾಗಲಿದೆ. ಇನ್ನು ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಲಲ್ಲಾ ಮೂರ್ತಿಯನ್ನು ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಎನ್ನುವರು ಕೆತ್ತನೆ ಮಾಡಿರುವುದು ವಿಶೇಷವಾಗಿದ್ದು, ಇದೀಗ ಅವರು ಕೆತ್ತನೆ  ಮಾಡಿದ ಮೂರ್ತಿಯೇ ಫೈನಲ್​​​​​​ ಎಂದು ಹೇಳಿದೆ. 

ರಾಮಜನ್ಮ ಭೂಮಿ ಟ್ರಸ್ಟ್​​​​​​ ಈ ಬಗ್ಗೆ ಮಾಹಿತಿ ನೀಡಿದೆ. ಮತ ಹಾಕುವ ಮೂಲಕ ರಾಮಲಲ್ಲಾನ ಮೂರ್ತಿಯನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಜನವರಿ 22ರಂದು ಈ ಮೂರ್ತಿಯನ್ನು ಪ್ರಾಣ ಪ್ರತಿಷ್ಠೆ ಮಾಡಲಾಗುವುದು.  ಎಂಬಿಎ ಪದವೀಧರರಾಗಿರುವ ಅರುಣ್ ಯೋಗಿರಾಜ್, ಕಾರ್ಪೋರೇಟ್ ನೌಕರಿಯನ್ನು ತೊರೆದು ಕುಟುಂಬ ನಡೆಸಿಕೊಂಡು ಬಂದ ಶಿಲ್ಪ ಕೆತ್ತನೆ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದು, ಇದೀಗ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮ ಲಲ್ಲ ಮೂರ್ತಿಯನ್ನು ಕೆತ್ತನೆ ಮಾಡಿದ್ದಾರೆ. ಮೈಸೂರಿನ ಅರುಣ್​ ಅವರೊಂದಿಗೆ ಬೆಂಗಳೂರಿನ ಜಿ,ಎಲ್,ಭಟ್ ಹಾಗೂ ರಾಜಸ್ಥಾನದ ಸತ್ಯನಾರಾಯಣ ಪಾಂಡೇ ಕೂಡ ಈ ರಾಮ ಲಲ್ಲ ಮೂರ್ತಿ ಕೆತ್ತನೆ ಮಾಡಿದ್ದಾರೆ. ಇನ್ನು 51 ಇಂಚು ಎತ್ತರದ ಮೂರ್ತಿ ಇದಾಗಿದ್ದು, ಒಟ್ಟು ಮೂರ್ತಿಯ ಗ್ರಾತ್ರ 8 ಅಡಿ ಎತ್ತರ ಹಾಗೂ ಮೂರು ಅಡಿ ಅಗಲ ಇದೆ. ಇದರಲ್ಲಿ ಪ್ರಭಾವಳಿಯೂ ಒಳಗೊಂಡಿದೆ. ಈ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಅನಾವರಣಗೊಳಿಸಲಿದ್ದಾರೆ.

ಜನವರಿ 22ರಂದು ಆಯೋಧ್ಯೆ ರಾಮ ಮಂದರದಲ್ಲಿ ಆಯೋಜನೆಗೊಂಡಿರುವ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ 2 ಸಾವಿರ ಆಹ್ವಾನಿತರಲ್ಲಿ ಅರುಣ್​ ಸಹ ಒಬ್ಬರು. ಎಂಬಿಎ ಪದವೀಧರರಾಗಿರುವ ಅರುಣ್ ಕಾರ್ಪೋರೇಟ್ ನೌಕರಿಯನ್ನು ತೊರೆದು ಕುಟುಂಬ ನಡೆಸಿಕೊಂಡು ಬಂದ ಶಿಲ್ಪ ಕೆತ್ತನೆ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. 2008ರಿಂದ ಈವರೆಗೂ ಸುಮಾರು 1 ಸಾವಿರಕ್ಕೂ ಹೆಚ್ಚು ವಿವಿಧ ಪ್ರತಿಮೆಗಳನ್ನು ಕತ್ತನೆ ಮಾಡಿದ್ದಾರೆ. ಈ ಮೊದಲು ಕೇದರನಾಥ ದೇಗುಲ್ಕೆ ಆದಿ ಶಂಕರಾಚಾರ್ಯರ ಮೂರ್ತಿಯನ್ನು ಅರುಣ್ ಕೆತ್ತಿದ್ದರು. ದೆಹಲಿಯ ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾದ ಸುಭಾಶಚಂದ್ರ ಬೋಸ್ ಅವರ ಪ್ರತಿಮೆಯನ್ನು ಸಹ ಅರುಣ್ ಕೆತ್ತಿದ್ದು, ಇದನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಇನ್ನು ದೆಹಲಿಯ ಜೈಸಲ್ಮೇರ್ ಹೌಸ್​ನಲ್ಲಿ ಡಾ ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಕೆತ್ತನೆಗೆಊ ನ್ಯಾಯಾಂ ಇಲಾಖೆ ಅರುಣ್ ಅವರಿಗೆ ನೀಡಿದ್ದು, ಪ್ರತಿಮೆ ಫೆಬ್ರವರಿ ಅಂತ್ಯದೊಳಗೆ ನೀಡುವಂತೆ ಸೂಚಿಸಿದೆ. ಇದು ಬರುವ ಏಪ್ರಿಲ್ 14ರಂದು ಲೋಕಾರ್ಪಣೆಗೊಳ್ಳಲಿದೆ. ರಾಮಲಲ್ಲಾ ವಿಗ್ರಹವನ್ನು ಕೆತ್ತನೆ ಮಾಡಿರುವ ಬಗ್ಗೆ ಟಿವಿ9 ಜೊತೆ ಮಾತನಾಡಿರುವ ಅರುಣ್, ರಾಮಲಲ್ಲಾ ಕಲ್ಲಿನ ವಿಗ್ರಹ ಕೆತ್ತನೆಗೆ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ ಎಂದು ಸಂತಸ ಹಂಚಿಕೊಂಡಿದ್ದಾರೆ.

ಅಯೋಧ್ಯಾ ರಾಮಮಂದಿರದಲ್ಲಿ ಅತ್ಯಾಕರ್ಷಕವಾದ ರಾಮಲಲ್ಲಾನ ಕಲ್ಲಿನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ರಾಮ ಬಾಲಕನಿದ್ದಾಗ ಹೇಗಿದ್ದ ಅನ್ನೋ ಪರಿಕಲ್ಪನೆಯಲ್ಲಿ ಈ ವಿಗ್ರಹ ಇರುತ್ತದೆ. 51 ಇಂಚಿನ ಕಲ್ಲಿನ ವಿಗ್ರಹದಲ್ಲಿ ಶ್ರೀ ರಾಮನ ಬಾಲ್ಯದ ಸ್ವರೂಪ, ಶ್ರೀ ರಾಮನ ಮುಗ್ದತೆ, ತುಂಟತನದ ಜೊತೆಗೆ ಗಾಂಭೀರ್ಯತೆ ಸಹಾ ಇರಲಿದೆ. ಪುಟ್ಟ ಬಾಲಕ ಧನುರ್ದಾಯಿಯಾಗಿ ಕಾಣಿಸಿಕೊಳ್ಳಲಿದ್ದಾನೆ. ಇದರ ಜೊತೆಗೆ ಮತ್ತೊಂದು ವಿಶೇಷ ಅಂದ್ರೆ ಇದುವರೆಗೂ ಪುರಾಣಗಳಲ್ಲಿ, ಕಥೆಗಳಲ್ಲಿ, ಧಾರವಾಹಿಗಳಲ್ಲಿ, ಸಿನಿಮಾಗಳಲ್ಲಿ, ಪುಸ್ತಕದ ಪುಟಗಳಲ್ಲಿ ಎಲ್ಲೂ ಸಹಾ ರಾಮಲಲ್ಲಾನನ್ನು ಯಾರು ನೋಡಿಲ್ಲ. ನಮ್ಮಲ್ಲಿ ಏನಿದ್ದರು ಶ್ರೀ ಕೃಷ್ಣನ ಬಾಲಲೀಲೆಯೇ ಹೊರತು ರಾಮನ ಬಾಲ್ಯದ ಬಗ್ಗೆ ಉಲ್ಲೇಖಗಳು ಚಿತ್ರಗಳು ಕಡಿಮೆಯೇ. ಹೀಗಾಗಿ ಇದೊಂದು ವಿಭಿನ್ನವಾದ ಕಲಾಕೃತಿಯಾಗಿ ಮೂಡಿಬರುವುದರಲ್ಲಿ ಯಾವುದೇ ಅನುಮಾನಗಳಿಲ್ಲ. ಇಂತಹ ವಿಭಿನ್ನ ವಿಶೇಷವಾದ ಮೂರ್ತಿ ಮೂಡಿಬಂದಿರುವುದೇ ರೋಚಕ.

ಅರುಣ್ ಯೋಗಿರಾಜ್ ಮೈಸೂರು ಮಣ್ಣಿನ ಅಪ್ಪಟ ಪ್ರತಿಭೆ. ಇವರದ್ದು ಕಲ್ಲಿನ ವಿಗ್ರಹ ಶಿಲ್ಪದಲ್ಲಿ 200 ವರ್ಷಗಳ ತಲೆಮಾರಿನ ಪರಂಪರೆ. ಇವರ ತಂದೆ, ತಾತಾ, ಮುತ್ತಾತ, ಅವರ ತಂದೆ ತಾತಾ ಅಂದರೆ ಬರೋಬ್ಬರಿ ಐದು ತಲೆ ಮಾರಿನಿಂದ ಕಲ್ಲಿನ ಶಿಲ್ಪ ಕಲೆಯಲ್ಲಿ ಇವರ ವಂಶಸ್ಥರು ತೊಡಗಿಕೊಂಡಿದ್ದಾರೆ. ಅರುಣ್ ತಂದೆ ಯೋಗಿರಾಜ್ ಕೂಡ ನುರಿತ ಶಿಲ್ಪಿ. ಅವರ ಅಜ್ಜ ಬಸವಣ್ಣ ಶಿಲ್ಪಿ ಮೈಸೂರು ರಾಜರ ಆಸ್ತಾನದಲ್ಲಿದ್ದರು. ತಾತಾ ಮುತ್ತಾತ ಕೂಡ ಶಿಲ್ಪಿಗಳಾಗಿದ್ದರು. ಸುಮಾರು 200 ವರ್ಷದ ಹಿಂದಿನವರ ಕಲೆ ಅರುಣ್ ಅವರಿಗೆ ಸಿದ್ದಿಯಾಗಿದೆ. ಅರುಣ್ ಯೋಗಿರಾಜ್ ಅವರು ಬಾಲ್ಯದಿಂದಲೂ ಕೆತ್ತನೆಯಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಎಂಬಿಎ ಮುಗಿಸಿದ ಬಳಿಕ ಖಾಸಗಿ ಕಂಪನಿಯಲ್ಲಿ ಕೆಲಕಾಲ ಕೆಲಸ ಮಾಡುತ್ತಿದ್ದರು. ಆದರೆ ಅವರಿಗೆ ಆ ಕೆಲದ ತೃಪ್ತಿ ನೀಡಲಿಲ್ಲ. ಆಗ ಅವರಿಗೆ ಅನಿಸಿದ್ದು ತಮ್ಮ ಪೂರ್ವಜರ ಕಲೆಯನ್ನು ಮುಂದುವರಿಸಬೇಕು ಅಂತಾ. ಮತ್ತೆ ವಾಪಸ್ಸು ಕಲೆಯ ಕಡೆಗೆ ಬಂದರು. ತಂದೆಗೆ ವಿಚಾರ ತಿಳಿಸಿದರು. ಮೊದ ಮೊದಲು ತಂದೆ ಇದಕ್ಕೆ ಒಪ್ಪದಿದ್ದರು ಮಗನ ಆಸಕ್ತಿ ಮುಂದೆ ಅವರು ಸೋಲಲೇಬೇಕಾಯಿತು. ಆದರೆ ಅವರು ಒಂದು ಷರತ್ತನ್ನು ಹಾಕಿ ಮಗನಿಗೆ ಅನುಮತಿ ನೀಡಿದರು. ನೀನು ಎಂಬಿಎ ಪದವೀಧರ. ಮಾರ್ಕೆಟಿಂಗ್ ನಿನ್ನ ತಲೆಯಲ್ಲಿ ಹಾಸು ಹೊಕ್ಕಿರುತ್ತದೆ. ಆದರೆ ಇದು ಶ್ರದ್ದಾ ಭಕ್ತಿಯ ಕೆಲಸ ಇಲ್ಲಿ ನೀನು ಮಾರ್ಕೆಟಿಂಗ್ ಮಾಡುವುದಾದರೆ ಸುತಾರಾಂ ನೀನು ಬರಬೇಡು. ಕಲ್ಲಿನ ವಿಗ್ರಹಗಳ ಖರೀದಿ ಮಾರಾಟಕ್ಕೆ ಇಲ್ಲಿ ಅವಕಾಶವಿಲ್ಲ. ಇಲ್ಲೇನಿದ್ದರು ಕಲಾಸೇವೆ ಅಷ್ಟೇ ಅಂತಾ ಕಡ್ಡಿ ತುಂಡಾದ ರೀತಿ ಷರತ್ತು ವಿಧಿಸಿದ್ದರು. ಅದಕ್ಕೆ ಒಪ್ಪಿದ ಅರುಣ್ ಯೋಗಿರಾಜ್ 2008ರಿಂದ ಮತ್ತೆ ಶಿಲ್ಪ ಕೆತ್ತನೆ ವೃತ್ತಿ ಮುಂದುವರಿಸಿದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!