ನಾನು ಕರಸೇವಕ, ನನ್ನನ್ನೂ ಬಂಧಿಸಿ: ಏಕಾಂಗಿಯಾಗಿ ಪ್ರತಿಭಟನೆಗಿಳಿದ‌ ಶಾಸಕ ಸುನೀಲ್ ಕುಮಾರ್
ಕರಸೇವಕರ ಬಂಧನ ಖಂಡಿಸಿ ಪ್ರತಿಭಟನೆ
ಸುನೀಲ್ ಕುಮಾರ್ ಪೊಲೀಸ್ ವಶಕ್ಕೆ

'ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಗುರುವಾರ ಬೆಳಿಗ್ಗೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಶಾಸಕರೂ ಆಗಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್‌ ಕುಮಾರ್‌ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

“ನನ್ನನ್ನೂ ಬಂಧಿಸಿ' ಎಂಬ ಬರಹವುಳ್ಳ ಕರಪತ್ರ ಹಿಡಿದು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ವರ್ತನೆ ಮುಂದುವರಿಸಿದ್ದಾರೆ' ಎಂದು ಆಕ್ರೋಶ ಹೊರಹಾಕಿದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!