ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಶಮಿತಾ ಆತ್ಮಹತ್ಯೆ.!
ಎಂಟು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ನೇಣಿಗೆ ಶರಣು

ಶಿವಮೊಗ್ಗ: ಕಳೆದ ಎಂಟು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ಮಲೆನಾಡಿನ ನವ ವಿವಾಹಿತೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ತೀರ್ಥಹಳ್ಳಿ ತಾಲ್ಲೂಕಿನ ನಾಲೂರು ಕೊಳಿಗೆ ಗ್ರಾಪಂ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ಘಟನೆ ನಡೆದಿದೆ. ಶಮಿತಾ ಬಿ.ಯು (24) ಮೃತ ದುರ್ಧೈವಿಯಾಗಿದ್ದಾರೆ.

ಮೃತರ ಪತಿ ವಿದ್ಯಾರ್ಥ್ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ವೃತ್ತಿ ಮಾಡುತ್ತಿದ್ದಾರೆ. ರಾತ್ರಿ ಪಾಳಿಯಲ್ಲಿ ಪತಿ ಕೆಲಸಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ಕಳೆದ ಮಾರ್ಚ್ ನಲ್ಲಿ ಶಮಿತಾ ಹಾಗೂ ವಿದ್ಯಾರ್ಥ್ ಪ್ರೀತಿಸಿ ಮದುವೆಯಾಗಿದ್ದರು. ರಾತ್ರಿ ಅತ್ತೆ ಮಾವನಿಗೆ ತಿಳಿಸಿ ಶರ್ಮಿತಾ ರಾತ್ರಿ ಊಟ ಮಾಡಿ ಮಲಗಲು ಕೋಣೆಗೆ ತೆರಳಿದ್ದರು. ಆದರೆ, ಬೆಳಗಾಗುವಷ್ಟರಲ್ಲಿ ನೇಣಿಗೆ ಶರಣಾಗಿದ್ದಾರೆ.

ಬೆಳಿಗ್ಗೆ ಕೊಠಡಿ ಬಾಗಿಲು ತೆರೆಯದಿದ್ದ ಹಿನ್ನಲೆಯಲ್ಲಿ ಕುಟುಂಬದವರು, ಕೆಲಸದವರು ಕಿಟಕಿಯಿಂದ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಯುವತಿಯ ಪೋಷಕರು ಆಗಮಿಸಿದ ನಂತರ ಬಾಗಿಲು ಒಡೆಯಲಾಗಿದೆ. ಮೃತದೇಹದ ಬಳಿ ಡೆತ್ ನೋಟ್ ಲಭ್ಯವಾಗಿದೆ. ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ ಎನ್ನಲಾಗಿದೆ. ಇನ್ನು ಮೃತದೇಹವನ್ನು ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತಹಶೀಲ್ದಾರ್ ಜಕ್ಕನ್ ಗೌಡರ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗುತ್ತಿದೆ. ಆಗುಂಬೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!