ಅಯೋಧ್ಯೆ ಗರ್ಭಗುಡಿ ಪೀಠದಲ್ಲಿ "ರಾಮಲಲ್ಲಾ" – ಮೊದಲ ಚಿತ್ರ ಬಿಡುಗಡೆ
ಗರ್ಭಗುಡಿಯಲ್ಲಿ ವಿರಾಜಮಾನವಾದ ಬಾಲರಾಮ
ಕನ್ನಡಿಗ ಅರುಣ್ ಯೋಗಿರಾಜ್ ಸಿದ್ಧಪಡಿಸಿದ ಪ್ರತಿಮೆ

ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮಮಂದಿರದ ಶಂಕುಸ್ಥಾಪನೆ ಕಾರ್ಯಕ್ರಮದ ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಆಹ್ವಾನ ಪತ್ರಿಕೆಗಳನ್ನೂ ಕಳುಹಿಸಲಾಗಿದೆ. ಈಗ ದೇಶಾದ್ಯಂತ ರಾಮಭಕ್ತರು ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಹಾಗೂ ರಾಮಮಂದಿರ ಪವಿತ್ರೀಕರಿಸುವ ಮತ್ತು ಭಗವಾನ್ ರಾಮನನ್ನು ನೋಡುವ ಆ ಕ್ಷಣಕ್ಕಾಗಿ ಕಾಯುತ್ತಿದ್ದಾರೆ. ಇದಕ್ಕೂ ಮುನ್ನ ಜನವರಿ 18 ರ ಗುರುವಾರದಂದು ಗರ್ಭಗುಡಿಯಲ್ಲಿ ಪ್ರತಿಮೆಯನ್ನು ಸ್ಥಾಪಿಸಲಾಯಿತು. ದೇವಾಲಯದ ಗರ್ಭಗುಡಿಯಲ್ಲಿ ರಾಮಲಲ್ಲಾ ಕುಳಿತಿರುವ ಮೊದಲ ಚಿತ್ರ ಬಿಡುಗಡೆಗೊಂಡಿದೆ.

ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿ ಬಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ ಅವರು ಸಮಗ್ರ ಪ್ರಕ್ರಿಯೆಯ ನಂತರ ವಿಗ್ರಹವನ್ನು ಆಯ್ಕೆ ಮಾಡಿದ್ದಾರೆ. ಗರ್ಭಗುಡಿಯ ಪೀಠದಲ್ಲಿ ಪ್ರತಿಷ್ಠಾಪಿಸಲಾಗಿರುವ ಬಾಲರಾಮನ ಮೂರ್ತಿ ಚಿತ್ರ ಬಿಡುಗಡೆಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. 

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೃಷ್ಣಶಿಲೆಯಿಂದ ಕೆತ್ತನೆ ಮಾಡಿದ ಸುಮಾರು 150-200 ಕೆಜಿ ತೂಕದ ಈ ವಿಗ್ರಹವನ್ನು ಬುಧವಾರ ಸಂಜೆ ಬಿಗಿ ಭದ್ರತೆಯ ಮೂಲಕ ಮೆರವಣಿಗೆಯೊಂದಿಗೆ ದೇವಸ್ಥಾನಕ್ಕೆ ತರಲಾಗಿತ್ತು. ಗುರುವಾರ ಸಂಜೆ ವೇಳೆಗೆ ಧಾರ್ಮಿಕ ವಿಧಿ ವಿಧಾನಗಳು ನೇರವೇರಿದ ಬಳಿಕ ಕೃಷ್ಣಶಿಲೆಯಲ್ಲಿ ಮೂಡಿದ 5 ವರ್ಷದ ರಾಮನ 51 ಇಂಚು ಎತ್ತರದ ಬಾಲರಾಮನ ಮೂರ್ತಿಯನ್ನ ಪ್ರತಿಷ್ಠಾಪಿಸಲಾಯಿತು. ಜನವರಿ 22ರಂದು ರಾಮಭಕ್ತರು ಇದರ ರೂಪ ಕಣ್ತುಂಬಿಕೊಳ್ಳುವ ಸಮಯ ಮತ್ತಷ್ಟು ಸನ್ನಿಹಿತವಾದಂತಾಗಿದೆ. ಅಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠೆ ನೆರವೇರಲಿದೆ.

1949 ರಿಂದ, ರಾಮಲಲ್ಲಾ ವಿಗ್ರಹವನ್ನು ಹೊಂದಿರುವ ತಾತ್ಕಾಲಿಕ ದೇವಾಲಯದಲ್ಲಿ ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ಎಂಬುದು ಗಮನಾರ್ಹ. ಹೊಸ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಿರುವ ಪ್ರತಿಮೆಗೆ ಮೂವರು ಶಿಲ್ಪಿಗಳು ಕೆಲಸ ಮಾಡುತ್ತಿದ್ದರು. ವಿವಿಧ ಕಲ್ಲುಗಳ ಮೇಲೆ ವಿವಿಧ ಕೆಲಸಗಳನ್ನು ಮಾಡಿ ಶಿಲ್ಪಗಳನ್ನು ರಚಿಸಿದರು. ಅದರಲ್ಲಿ ಇಬ್ಬರಿಗೆ ಕರ್ನಾಟಕದಿಂದ ಕಲ್ಲುಗಳು ಬಂದಿವೆ. ಮೂರನೇ ಪ್ರತಿಮೆಯನ್ನು ರಾಜಸ್ಥಾನದಿಂದ ತಂದ ಬಂಡೆಯಿಂದ ತಯಾರಿಸಲಾಗುತ್ತಿದೆ. ಈ ಶಿಲ್ಪಗಳನ್ನು ಜೈಪುರದ ಶಿಲ್ಪಿ ಸತ್ಯನಾರಾಯಣ ಪಾಂಡೆ ಮತ್ತು ಕರ್ನಾಟಕದ ಗಣೇಶ್ ಭಟ್ ಮತ್ತು ಅರುಣ್ ಯೋಗಿರಾಜ್ ಕೆತ್ತಿದ್ದಾರೆ. ಆದರೆ, ಈ ಮೂರು ಪ್ರತಿಮೆಗಳಲ್ಲಿ ಅರುಣ್ ಯೋಗಿರಾಜ್ ನಿರ್ಮಿಸಿದ ಪ್ರತಿಮೆಯನ್ನು ರಾಮಮಂದಿರಕ್ಕೆ ಆಯ್ಕೆ ಮಾಡಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!