ಕಾಂಗ್ರೆಸ್‌ ಬಿಟ್ಟು ಮತ್ತೆ ಬಿಜೆಪಿಗೆ  ಬಂದ ಜಗದೀಶ್​​ ಶೆಟ್ಟರ್.!
ಬಿಜೆಪಿಗೆ ಘರ್ ಪಾಪ್ಸಿ ಆದ ಜಗದೀಶ್ ಶೆಟ್ಟರ್

ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಪಕ್ಷದ ವಿರುದ್ದ ತಿರುಗಿ ಬಿದ್ದು ಕಾಂಗ್ರೇಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇದೀಗ ಮತ್ತೆ ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ.

ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಟಿಕೆಟ್  ವಂಚಿತರಾಗಿ ಕಾಂಗ್ರೆಸ್​​ ಪಕ್ಷ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಇಂದು ಬಿಜೆಪಿ ಮರು ಸೇರ್ಪಡೆಯಾಗುವ ಮೂಲಕ ಕೈ ನಾಯಕರಿಗೆ ಬಿಗ್​ ಶಾಕ್ ನೀಡಿದ್ದಾರೆ. ಈ ನಡುವೆ ಮರಳಿ ಪಕ್ಷಕ್ಕೆ ಬಂದ ಶೆಟ್ಟರ್ ಅವರನ್ನು ಬಿಜೆಪಿಯ ಹಿರಿಯ ನಾಯಕರು ಸ್ವಾಗತ ಮಾಡ್ತಿದ್ದಾರೆ. ಶೆಟ್ಟರ್ ಘರ್ ವಾಪ್ಸಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಹಿರಿಯ ನಾಯಕ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಮಾಜಿ ಸಿಎಂಗೆ ಸಾಮಾಜಿಕ ಜಾಲತಾಣದಲ್ಲಿ ಸ್ವಾಗತ ಕೋರಿದ್ದಾರೆ.

ಇಂದು ಕಾಂಗ್ರೆಸ್‌ಗೆ ರಾಜೀನಾಮೆ ನೀಡುವುದರ ಜೊತೆಗೆ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ದೆಹಲಿಯಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿರುವ ಶೆಟ್ಟರ್, ಜೆಪಿ ನಡ್ಡಾ ನೇತೃತ್ವದಲ್ಲಿ ಬಿಜೆಪಿಗೆ ಮರುಸೇರ್ಪಡೆಯಾಗಿದ್ದಾರೆ. ವಿಧಾನಪರಿಷತ್ತು ಸದಸ್ಯತ್ವಕ್ಕೆ ರಾಜೀನಾಮೆ: ಕರ್ನಾಟಕ ವಿಧಾನಪರಿಷತ್ತು ಸದಸ್ಯತ್ವಕ್ಕೆ ಈ ದಿನ ನಾನು ನನ್ನ ಸ್ವ-ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿಬೇಕಾಗಿ ವಿನಂತಿ. ಇಲ್ಲಿಯವರೆಗೆ ತಾವು ನೀಡಿದ ಸಹಕಾರಕ್ಕಾಗಿ ವಂದನೆಗಳು ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರು ಸ್ಪೀಕರ್‌ ಬಸವರಾಜ ಹೊರಟ್ಟಿ ಅವರಿಗೆ ಬರೆದ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಗೆ ಮರಳಿ ಸೇರ್ಪಡೆಯಾದ ಜಗದೀಶ್​ ಶೆಟ್ಟರ್​ ಅವರಿಗೆ ಅಭಿನಂದನೆಗಳು. ಅವರ ಕುಟುಂಬ ಜನಸಂಘದಿಂದ ಆರಂಭವಾಗಿ ಬಿಜೆಪಿಗೆ ಶಕ್ತಿಯನ್ನು ತುಂಬಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯಿತ ನಾಯಕರನ್ನು ನಡೆಸಿಕೊಳ್ಳುವ ರೀತಿಯಿಂದ ಮಾನ್ಯ ಜಗದೀಶ್ ಶೆಟ್ಟರ್ ರವರು ಬೇಸರವಾಗಿದ್ದರು ಎಂದು ಭಾವಿಸುತ್ತೇನೆ. ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯಿತ ನಾಯಕರನ್ನು ರಾಜಕೀಯವಾಗಿ ಮುಗಿಸುವ ಷಡ್ಯಂತ್ರಕ್ಕೆ ಲಿಂಗಾಯಿತ ನಾಯಕರು ಬಲಿಯಾಗಬಾರದು ಎಂದು ಯತ್ನಾಳ್ ಬರೆದುಕೊಂಡಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!