ಧರ್ಮಸ್ಥಳ:  ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು
ವಿಷ ಸೇವಿಸಿದ್ದ ಬಾಲಕಿ ಮೃತ್ಯು

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಫೆ.12ರಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ.

ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ.

ಫೆ.7ರಂದು ವಿಷ ಸೇವಿಸಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಇಂದು ಮುಂಜಾನೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ.

ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಈಕೆಗೆ ಡ್ರಾಯಿಂಗ್ ಶಿಕ್ಷಕ  ಇಲ್ಲಸಲ್ಲದ ಆರೋಪ ಮಾಡಿ ಇನ್ನೊಂದು ವಿದ್ಯಾರ್ಥಿನಿಗೆ ಮಾಡಿದ ಮೆಸೇಜ್ ನಿಂದ ಅವಮಾನಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗಿದೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!