ಕರ್ನಾಟಕ ಬಜೆಟ್ 2024: "ಸಿದ್ದು ಲೆಕ್ಕಾಚಾರ" - ಹೇಗಿದೆ ಗ್ಯಾರಂಟಿ.!?
ಬಜೆಟ್​​ನಲ್ಲಿ ಏನೇನು ಘೋಷಣೆ ಮಾಡಿದ್ದಾರೆ.? ಇಲ್ಲಿವೆ ಹಲವು ಮುಖ್ಯಾಂಶಗಳು.!!

ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಇಂದು (ಫೆಬ್ರವರಿ 16, ಶುಕ್ರವಾರ) ಕರ್ನಾಟಕದ 2024-25ನೇ ಸಾಲಿನ ಬಜೆಟ್  ಮಂಡನೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸಿದ 15ನೇ ಬಜೆಟ್ ಇದಾಗಿದೆ.

ಮತ್ತೊಂದೆಡೆ ಲೋಕಸಭೆ ಚುನಾವಣೆಯೂ ಸಮೀಪಿಸುತ್ತಿದ್ದು, ಬಜೆಟ್ ಮೇಲಿನ ನಿರೀಕ್ಷೆಗಳು ಹೆಚ್ಚಾಗಿವೆ. ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿಗಳ ಕಾರಣ ಈ ಬಾರಿ ಬಜೆಟ್ ಗಾತ್ರ ಹೆಚ್ಚಾಗುವ ಸಾಧ್ಯತೆ ಇದೆ. ಅದೇ ರೀತಿ ಸಾಲದ ಪ್ರಮಾಣವೂ ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಲೋಕಸಭೆ ಚುನಾವಣೆಯ ಕಾರಣ ಆರ್ಥಿಕ ಹೊರೆ ಆಗದಂತೆ ಜನಪ್ರಿಯ ಬಜೆಟ್‌ ಮಂಡನೆ ಮಾಡಬೇಕಾದ ಅನಿವಾರ್ಯತೆಯೂ ಸಿದ್ದರಾಮಯ್ಯ ಮುಂದಿದೆ. 5 ಗ್ಯಾರಂಟಿಗಳಿಗೆ 58 ಸಾವಿರ ಕೋಟಿ ಮೀಸಲು ಅನಿವಾರ್ಯವಾಗಿದೆ. ಗ್ಯಾರಂಟಿ ಯೋಜನೆಗಳಿಗಾಗಿ ತೆರಿಗೆ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಆದಾಗ್ಯೂ, ತೆರಿಗೆ ಹೆಚ್ಚಳ ಮಾಡದೆ ಬಜೆಟ್‌ ಮಂಡಿಸುವ ಸವಾಲು ಕೂಡ ಅವರ ಮುಂದಿದೆ.  ಮಂಡನೆಯಾಗಿರುವ ಬಜೆಟ್‌ನ ಮುಖ್ಯಾಂಶಗಳೇನು? ಈ ಕುರಿತ ಸಮಗ್ರ ಮಾಹಿತಿ ಇಲ್ಲಿದೆ.

 

ಬಜೆಟ್​​ನಲ್ಲಿ ಏನೇನು ಘೋಷಣೆ ಮಾಡಿದ್ದಾರೆ.? ಇಲ್ಲಿವೆ ಹಲವು ಮುಖ್ಯಾಂಶಗಳು;

  • ಕನ್ನಡ ಭಾಷಾಂತರಕ್ಕೆ ನೂತನ ತಂತ್ರಾಂಶ ಅಭಿವೃದ್ಧಿಪಡಿಸಲಾಗುವುದು. ಕನ್ನಡ ಕಸ್ತೂರಿ ಎಂಬ ನೂತನ ತಂತ್ರಾಂಶ ಅಭಿವೃದ್ಧಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಣೆ ಮಾಡಿದ್ದಾರೆ.

 

  • ಮಂಗಳೂರಿನಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ನಿರ್ಮಾಣ ಮಾಡಲಾಗುವುದು. 35 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ನಿರ್ಮಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು.

 

  • ಆಡಳಿತ ವ್ಯವಸ್ಥೆ ಬಲಪಡಿಸಲು ತಂತ್ರಜ್ಞಾನ ಬಳಕೆ ಮಾಡಲಾಗುವುದು. ಕೃತಕ ಬುದ್ಧಿಮತ್ತೆ, ಮಿಷನ್ ಲರ್ನಿಂಗ್ ತಂತ್ರಜ್ಞಾನ ಬಳಕೆ ಮಾಡಲಾಗುವುದು. ನೂತನ ಪೊಲೀಸ್​ ಠಾಣಾ ಕಟ್ಟಡಗಳಿಗೆ ₹30 ಕೋಟಿ ಮೀಸಲು ಇಡಲಾಗುವುದು. ವಿಧಿ ವಿಜ್ಞಾನ ಪ್ರಯೋಗಾಲಯಗಳ ಮೊಬೈಲ್ ಫೊರೆನ್ಸಿಕ್​, ಆಡಿಯೋ ಮತ್ತು ವಿಡಿಯೋ ವಿಭಾಗ ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. 10 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಉಪಕರಣ, ತಂತ್ರಾಂಶ ಪೂರೈಕೆ ಮಾಡಲಾಗುವುದು. ಎಲ್ಲಾ ಕಾರಾಗೃಹಗಳ ಸುಗಮ ಆಡಳಿತ ಹಾಗೂ ಭದ್ರತೆಗೆ ಕ್ರಮ ಕೈಗೊಳ್ಳಲಾಗುವುದು. 5 ಕೋಟಿ ರೂ. ವೆಚ್ಚದಲ್ಲಿ ಎಐ ತಂತ್ರಾಂಶ ಬಳಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

 

  • ಗೃಹಲಕ್ಷ್ಮೀ ಯೋಜನೆಗೆ 28 ಸಾವಿರದ 608 ಕೋಟಿ ರೂಪಾಯಿ ಮೀಸಲು ಇಡಲಾಗುವುದು. 1.33 ಕೋಟಿ ಮಹಿಳೆಯರಿಗೆ ಯೋಜನೆಯಿಂದ ಲಾಭವಾಗಲಿದೆ. ಜನವರಿ 31ರವರೆಗೆ 1.27 ಕೋಟಿ ಮಹಿಳೆಯರ ನೋಂದಣಿಯಾಗಿದೆ, 11726 ಕೋಟಿ ನೇರವಾಗಿ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. 2024-25ರಲ್ಲಿ 28,608 ಕೋಟಿ ಹಣ ರೂಪಾಯಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಘೋಷಣೆ ಮಾಡಿದರು.

 

  • ಬೆಂಗಳೂರಿನ 4 ಸ್ಥಳಗಳಲ್ಲಿ ಹೈಟೆಕ್​ ಕ್ರೀಡಾ ಸಂಕೀರ್ಣ ನಿರ್ಮಾಣ ಮಾಡಲಾಗುವುದು. ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಕ್ರೀಡಾನಗರ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ. 70 ಎಕರೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾನಗರ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.  ರಾಜ್ಯದ 14 ವರ್ಷದ ಕ್ರೀಡಾಪಟುಗಳಿಗೆ ಮಿನಿ ಒಲಿಂಪಿಕ್ಸ್ ಆಯೋಜನೆ ಮಾಡಲಾಗುವುದು. ರಾಜ್ಯದ ಕ್ರೀಡಾಪಟುಗಳಿಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲಾಗುವುದು. ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ವಿಮೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

 

  • ಸುಳ್ಳು ಸುದ್ದಿ ತಡೆಗಟ್ಟಲು ಐಟಿಬಿಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡ ಹಾಗೂ ವಿಶೇಷ ಕೋಶ ರಚನೆ ಮಾಡಲಾಗುವುದು. ದೀಫ್​ ಫೇಕ್​​ ಹಾಗೂ ಸೈಬರ್ ಕ್ರೈಂ ತಡೆಗೆ 43 ಹೊಸ ಪೊಲೀಸ್​ ಸಿಇಎನ್​ ಠಾಣೆ ಆರಂಭಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.

 

  • ರಾಜ್ಯದ 20 ಸಾವಿರ ಸೈನ್ಸ್​ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗೆ 10 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.

 

  • ಸರ್ಕಾರಿ ಪ್ರೌಢ ಶಾಲೆಗಳ ಅಭಿವೃದ್ಧಿಗೆ 50 ಕೋಟಿ ರೂ. ಮೀಸಲಿಡಲಾಗುವುದು. ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್​ ಹಾಗೂ ಇಂಟರ್​ನೆಟ್​ ಸೌಲಭ್ಯಕ್ಕೆ 50 ಕೋಟಿ ಪ್ಯಾಕೇಜ್ ನೀಡಲಾಗುವುದು. 2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.

 

  • ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಸೂಫಿ ಅಧ್ಯಯನ ಪೀಠ ಸ್ಥಾಪನೆ ಮಾಡಲಾಗುವುದು. ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಸಿದ್ದರಾಮೇಶ್ವರ ಅಧ್ಯಯನ ಪೀಠ ರಚನೆ ಮಾಡಲಾಗುವುದು. ಮಾಜಿ ಸಿಎಂ ಬಂಗಾರಪ್ಪನವರ ಸ್ಮಾರಕ ನಿರ್ಮಾಣಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು.

 

  • ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್​ ಆರಂಭಿಸಲಾಗುವುದು. ಗ್ರಾಮ ಪಂಚಾಯಿತಿಗಳ ಸಭೆ, ಕಾರ್ಯಕಲಾಪಗಳ ನೇರಪ್ರಸಾರ ಮಾಡಲಾಗುವುದು. ರಾಜ್ಯದ 50 ಗ್ರಾ.ಪಂ.ಗಳಿಗೆ ಹೊಂಬೆಳಕು ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಪ್ರತಿ ತಾಲೂಕಿನಲ್ಲಿ ಕನಿಷ್ಠ 2ರಂತೆ ಬೂದುನೀರು ಸಂಸ್ಕರಣಾ ಘಟಕ ಸ್ಥಾಪನೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು.

 

  • ವಕ್ಫ್​​ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂ. ಒದಗಿಸಲಾಗುವುದು. ಜೈನ್​ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ. ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

 

  • ಕಳೆದ ಬಾರಿ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ಇತ್ತು. ಈ ಬಾರಿ 3.50 ಲಕ್ಷ ಕೋಟಿ ಅಥವಾ 3.80 ಲಕ್ಷ ಕೋಟಿ ತಲುಪುವ ಸಾಧ್ಯತೆ ಇದೆ. ಕಳೆದ ಬಜೆಟ್‌ನಲ್ಲಿ 85,815 ಕೋಟಿ ರೂ. ಸಾಲದ ಮೊರೆ ಹೋಗಿತ್ತು. ಈ ಬಾರಿ ಅಂದಾಜು 1 ಲಕ್ಷ ಕೋಟಿಗೆ ಸಾಲ ಹೆಚ್ಚಾಗುವ ಸಾಧ್ಯತೆ ಇದೆ.

 

  • ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಜೆಟ್​​ನಲ್ಲಿ ಮಹತ್ವದ ಘೋಷಣೆಗಳು ಹೊರಬೀಳುವ ನಿರೀಕ್ಷೆಗಳೂ ಇವೆ. ಈ ಬಾರಿ ಬಜೆಟ್ ಗಾತ್ರ ಸುಮಾರು 50 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ.

 

  • ಗ್ಯಾರಂಟಿ ಯೋಜನೆಗಳ ಜೊತೆಗೆ ಹೊಸ ಯೋಜನೆಗಳನ್ನು ನೀಡುವ ದೊಡ್ಡ ಸವಾಲು ಸಿದ್ದರಾಮಯ್ಯ ಮುಂದೆ ಇದ್ದು, ಬಜೆಟ್ ಗಾತ್ರ ಮತ್ತು ಸಾಲದ ಹೊರೆ ಹೆಚ್ಚಾಗಲಿದೆ. ಬಜೆಟ್​ನಲ್ಲಿ ಮದ್ಯದ ಮೇಲಿನ ಸುಂಕವನ್ನು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಆ ಮೂಲಕ ಆದಾಯ ಕ್ರೋಢೀಕರಣಕ್ಕೆ ಸಿದ್ದರಾಮಯ್ಯ ಕ್ರಮಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

 

  • ಉತ್ತರ ಭಾರತದ ರಾಜ್ಯಗಳು ಎಷ್ಟು ತೆರಿಗೆ ಪಾಲು ಪಡೆದಿವೆ, ದಕ್ಷಿಣ ಭಾರತದ ರಾಜ್ಯಗಳು ಎಷ್ಟು ತೆರಿಗೆ ಪಾಲು ಪಡೆದಿವೆ ಎಂದು ಬಜೆಟ್​ನಲ್ಲಿ ಉಲ್ಲೇಖ ಮಾಡುವ ಸಾಧ್ಯತೆ ಇದೆ. 2018-19 ಸಾಲಿನಲ್ಲಿ ಉತ್ತರ ಭಾರತ ಪಡೆದ ಪಾಲುಗಳನ್ನು ನೋಡುವುದಾದರೆ, ಉತ್ತರಪ್ರದೇಶ - 1,36,766 ಕೋಟಿ, ಬಿಹಾರ - 73,602 ಕೋಟಿ, ಮಧ್ಯಪ್ರದೇಶ- 57486 ಕೋಟಿ, ಪಶ್ಚಿಮ ಬಂಗಾಳ 55,775 ಕೋಟಿ, ಮಹಾರಾಷ್ಟ್ರ 42050 ಕೋಟಿ ರೂ. ಪಡೆದಿದೆ. 2018-2019 ರಲ್ಲಿ ದಕ್ಷಿಣ ಭಾರತದ ರಾಜ್ಯಗಳು ಪಡೆದಿರುವ ತೆರಿಗೆ ವಿವರಗಳನ್ನು ನೋಡುವುದಾದರೆ, ಆಂಧ್ರ ಪ್ರದೇಶ 32,787 ಕೋಟಿ, ತಮಿಳುನಾಡು 30,638 ಕೋಟಿ, ಕರ್ನಾಟಕ 35,894 ಕೋಟಿ, ತೆಲಂಗಾಣ 18,560 ಕೋಟಿ ರೂ. ಆಗಿದೆ.

 

  • ಉತ್ತರ ಪ್ರದೇಶ 1,69,745 ಕೋಟಿ, ಬಿಹಾರ 95,509 ಕೋಟಿ, ಮಧ್ಯಪ್ರದೇಶ 74,542 ಕೋಟಿ, ಪಶ್ಚಿಮಬಂಗಾಳ 71,434 ಕೋಟಿ, ಮಹಾರಾಷ್ಟ್ರ 60,000 ಕೋಟಿ ರೂಪಾಯಿ. ಆಂಧ್ರಪ್ರದೇಶ 38,176 ಕೋಟಿ, ತಮಿಳುನಾಡು 38,731 ಕೋಟಿ, ಕರ್ನಾಟಕ 34,596 ಕೋಟಿ, ತೆಲಂಗಾಣ 19,605 ಕೋಟಿ ರೂಪಾಯಿ.

 

  • ಐದು ರಾಜ್ಯಗಳು ಹೆಚ್ಚಿನ ತೆರಿಗೆ ಪಾಲು ಪಡೆಯುತ್ತಿದೆ. ಉತ್ತರ ಪ್ರದೇಶ 2,18,816 ಕೋಟಿ, ಬಿಹಾರ 1,22,685 ಕೋಟಿ, ಮಧ್ಯಪ್ರದೇಶ 95,752 ಕೋಟಿ, ಪಶ್ಚಿಮಬಂಗಾಳ 91,764 ಕೋಟಿ, ಮಹಾರಾಷ್ಟ್ರ 77,053 ಕೋಟಿ ರೂಪಾಯಿ. ಆಂಧ್ರಪ್ರದೇಶ 49,364 ಕೋಟಿ, ತಮಿಳುನಾಡು 49,754 ಕೋಟಿ, ಕರ್ನಾಟಕ 44,485 ಕೋಟಿ ರೂಪಾಯಿ.

 

  • ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲ ಎಂದ ಸಿದ್ದರಾಮಯ್ಯ ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆಯನ್ನು ಉಲ್ಲೇಖಿಸಿದರು. ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು. ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ಗಿಮಿಕ್‌ ಅಲ್ಲ. 5 ಗ್ಯಾರಂಟಿ ಜಾರಿಯಿಂದ ಇಡೀ ಜಗತ್ತು ರಾಜ್ಯದತ್ತ ನೋಡುತ್ತಿದೆ. ಶಕ್ತಿ ಯೋಜನೆಯಿಂದ ಮಹಿಳೆಯರು ಸಂತಸಗೊಂಡಿದ್ದಾರೆ. 5 ಗ್ಯಾರಂಟಿ ಜಾರಿಯಿಂದ ಸರ್ಕಾರದಲ್ಲಿ ಹಣವಿಲ್ಲ ಎಂದು ಸುಳ್ಳು ಹೇಳ್ತಿದ್ದಾರೆ. ಕೇಂದ್ರ ಸರ್ಕಾರ ಮಾಡದ್ದನ್ನು ನಾವು ಮಾಡಿದ್ದೇವೆ. ಬಿಟ್ಟಿ ಗ್ಯಾರಂಟಿ, ದಿವಾಳಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಎಲ್ಲರನ್ನೂ ಒಳಗೊಂಡಂತೆ ರಾಜ್ಯ ಅಭಿವೃದ್ಧಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

 

  • ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್​ ನಿರ್ಮಾಣ ಮಾಡಲಾಗುವುದು. ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾ. ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್​ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

 

  • ಮೀನುಗಾರಿಕೆ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ್ದಾರೆ. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಮಾಡುವುದಕ್ಕಾಗಿ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಅವರು ಘೋಷಣೆ ಮಾಡಿದ್ದಾರೆ. ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಭದ್ರಾವತಿಯಲ್ಲಿ ಹೈಟೆಕ್​ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.

 

  • ರಾಜ್ಯದ ಅಸ್ಮಿತೆ, ಸಂಸ್ಕೃತಿಗೆ ಅನುಗುಣವಾಗಿ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಕ್ಕೆ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಉಪನ್ಯಾಸಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು, ಕಾಲೇಜುಗಳಿಗೆ ಉಚಿತ ಕರೆಂಟ್ ನೀಡಲಾಗುವುದು. ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ನಿರಂತರ ನೀರಿನ ಸೌಲಭ್ಯ, ಫ್ರೀ ಕರೆಂಟ್​ಗೆ 25 ಕೋಟಿ ರೂಪಾಯಿ ಮೀಸಲು ಇಡಲಾಗುವುದು. ಮಹಿಳಾ ಪಾಲಿಟೆಕ್ನಿಕ್​​ ಉನ್ನತೀಕರಣಕ್ಕೆ 30 ಕೋಟಿ ರೂ. ಮೀಸಲು ಇಡಲಾಗುವುದು. ರಾಜ್ಯದ 20 ಸಾವಿರ ವಿಜ್ಞಾನ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗಾಗಿ 10 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ, ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂಪಾಯಿ ಮೀಸಲು ಇಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.
  • ಸಿಎಂ ಸಿದ್ದರಾಮಯ್ಯ 3 ಗಂಟೆ 14 ನಿಮಿಷ ಸುದೀರ್ಘ ಬಜೆಟ್ ಮಂಡಿಸಿದ್ದಾರೆ. ಬಜೆಟ್ ಗಾತ್ರ ಒಟ್ಟು 3,71,383 ಕೋಟಿ ರೂಪಾಯಿ ಆಗಿದೆ. ಬಜೆಟ್ ಭಾಷಣ ಮುಕ್ತಾಯವಾದ ಕಾರಣ ವಿಧಾನಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 10.15ಕ್ಕೆ ಕಲಾಪ ಆರಂಭವಾಗಲಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!