ಮೂಡಬಿದಿರೆ: ಅಕ್ರಮವಾಗಿ ಗೋಮಾಂಸ ಮಾರಾಟ - ಓರ್ವನ ಬಂಧನ
ಮೂಡಬಿದಿರೆ: ಅಕ್ರಮವಾಗಿ ಗೋಮಾಂಸ ಮಾರಾಟ - ಓರ್ವನ ಬಂಧನ

ಮೂಡುಬಿದಿರೆ:  ಕೋಲ್ಡ್ ಸ್ಟೋರೇಜ್ ಒಂದರಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಿದ್ದಕಟ್ಟೆ ಸಂಗಬೆಟ್ಟು ನಿವಾಸಿ ಇಸ್ಮಾಯಿಲ್‌ ಎಂದು ಗುರುತಿಸಲಾಗಿದೆ

ಕೋಲ್ಡ್ ಸ್ಟೋರೇಜ್‌ನಲ್ಲಿ ದನದ ಮಾಂಸವನ್ನು ಶೇಖರಿಸಿಟ್ಟು ಮಾರುತ್ತಿರುವ ಖಚಿತ ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ನಿತ್ಯಾನಂದ ಅವರ ಮಾರ್ಗದರ್ಶನದಲ್ಲಿ ಪೊಲೀಸರು ದಾಳಿ ನಡೆಸಿದಾಗ ಅಲ್ಲಿ 10 ಕೆ.ಜಿ.ಯಷ್ಟು ದನದ ಮಾಂಸ ಪತ್ತೆಯಾಗಿದೆ. 

ಈ ಹಿಂದೆಯೂ ಅಕ್ರಮವಾಗಿ ದನದ ಮಾಂಸ ಮಾಡುತ್ತಿರುವ ಬಗ್ಗೆ ಇಸ್ಮಾಯಿಲ್ ವಿರುದ್ಧ ಹಲವು ಪ್ರಕರಣಗಳು  ದಾಖಲಾಗಿವೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!