ಮಂಗಳೂರು: ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಆರ್ ಆಶೋಕ್‌ಗೆ ಎಚ್ಚರಿಕೆ ಕೊಟ್ಟ ಪುನೀತ್ ಅತ್ತಾವರ
◼ ಆರ್. ಅಶೋಕ ಅಲ್ಲ, ಅಡ್ಜಸ್ಟ್ ಮೆಂಟ್ ಅಶೋಕ
◼ ಬಜರಂಗದಳದವರ ಮೇಲೆಯೇ ಗೂಂಡಾ ಕಾಯ್ದೆ ಹಾಕಿದ್ದೆ ಆರ್. ಅಶೋಕ
◼ ವಿಪಕ್ಷ ನಾಯಕನಿಗೆ ಪುನೀತ್ ಅತ್ತಾವರ ಎಚ್ಚರಿಕೆ

ಗೃಹ ಸಚಿವನಾಗಿದ್ದಾಗ ಜರಂಗದಳದವರ ಮೇಲೆಯೇ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಧಿವೇಶನದಲ್ಲಿ ಹೇಳಿಕೊಂಡ ವಿರೋಧ ಪಕ್ಷದ ನಾಯಕ ಅಶೋಕ್ ವಿರುದ್ದ ಮಂಗಳೂರು ಜರಂಗದಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಬಜರಂಗದಳದ ಕಾರ್ಯಕರ್ತರ ಪ್ರತಿರೋಧ ಎದುರಿಸಲು ಸಿದ್ಧರಾಗಿ ಎಂದು ಜರಂಗದಳ ಮಂಗಳೂರು ವಿಭಾಗ ಸಹಸಂಯೋಜಕ ಪುನೀತ್ ಅತ್ತಾವರ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ನಿನ್ನೆ ನಡೆದ ಅಧಿವೇಶನದಲ್ಲಿ ಮಂಗಳೂರು ಬ್ ದಾಳಿ ಬಗ್ಗೆ ಮಾತನಾಡಿದರು. ಪಬ್ ದಾಳಿ ವೇಳೆ ನಾನು ರಾಜ್ಯದ ಗೃಹ ಸಚಿವನಾಗಿದ್ದೆ. ಅವತ್ತು  ಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ನಾನು ಯಾವುದೇ ಒತ್ತಡಕ್ಕೆ ಮಣಿಯದೇ ಪಬ್ ದಾಳಿ ಮಾಡಿದ್ದ  ಜರಂಗದಳದವರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಧಿವೇಶನದಲ್ಲಿ ಹೇಳಿಕೆ ನೀಡಿದ್ದರು. ಈಗಿನ ಗೃಹ ಸಚಿವ ಪರಮೇಶ್ವರ್'ಗೆ ಬುದ್ದಿ ಹೇಳೋ ಭರದಲ್ಲಿ ಆರ್.ಅಶೋಕ್ ಮಾತನಾಡಿದ್ದರು. ಸದ್ಯ ಅಶೋಕ್ ಅವರ ಈ ಹೇಳಿಕೆಗೆ ಆಕ್ರೋಶ ಭುಗಿಲೆದ್ದಿದೆ.

ಸದ್ಯ ಅಶೋಕ್ ಹೇಳಿಕೆ ವಿರುದ್ದ ಕರಾವಳಿ  ಜರಂಗದಳ ಕೆಂಡ ಮಂಡಲವಾಗಿದ್ದಾರೆ. ಆರ್ ಅಶೋಕ್ ಅಲ್ಲ. ಅಡ್ಜಸ್ಟ್ ಮೆಂಟ್ ಅಶೋಕ್ ಅವರೇ.'ನಿಮ್ಮ ನಾಲಗೆಯನ್ನು ನಾಲಗೆ ರೀತಿಯಲ್ಲಿ ಬಳಸಿ, ಎಕ್ಕಡದ ರೀತಿ ಬಳಸಿಕೊಳ್ಳಬೇಡಿ''ಅಡ್ಜಸ್ಟ್ ಮೆಂಟ್ ರಾಜಕಾರಣ ಎಂಬ ಕೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ ಎಂದು ಕಿಡಿಕಾರಿದ್ದಾರೆ.

ಪ್ರತಿಪಕ್ಷನಾಯಕನಾಗಿರುವ ನೀವು ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ. ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ.ಒಂದಾ ಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ ಇಲ್ಲದಿದ್ದರೆ ಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಎಂದು ಆರ್.ಅಶೋಕ್ ಗೆ ಫೇಸ್ ಬುಕ್ ನಲ್ಲಿ ಭಜರಂಗದಳ ಮುಖಂಡನಿ0ದ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ.

 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!