ಪುತ್ತೂರು: ಬೇಷರತ್ ಆಗಿ ಬಿಜೆಪಿಗೆ ಸೇರ್ಪಡೆಯಾಗ್ತಾರಾ ಅರುಣ್ ಕುಮಾರ್..! ಕರಾವಳಿಯ ಬಿಜೆಪಿ ಪಾಳಯಕ್ಕೆ ಬಲ ತುಂಬುತ್ತಾರಾ ಪುತ್ತಿಲ?
ಅರುಣ್ ಕುಮಾರ್ ಪುತ್ತಿಲ ಭೇಟಿಯಾಗಿದ್ದು ನಿಜ
ಹಿಂದೂ ಮುಖಂಡನ ಪಕ್ಷ ಸೇರ್ಪಡೆ ಬಗ್ಗೆ ವಿಜಯೇಂದ್ರ ಹೇಳಿದ್ದಿಷ್ಟು

ಕಳೆದ ವಿಧಾನಸಭಾ ಚುನಾವಣೆಯಲ್ಲಿ ತೀವ್ರ ಪೈಪೋಟಿ ಹಾಗೂ ಕುತೂಹಲದ ಕಣವಾಗಿದ್ದ ಪುತ್ತೂರಿನಲ್ಲಿ ಬೆಳವಣಿಗೆ ಬಿಜೆಪಿಗೆ ದೊಡ್ಡ ಮಟ್ಟದ ತಲೆ ನೋವಾಗಿತ್ತು. ಸದ್ಯ ಬಿಜೆಪಿ ಗಿs ಪುತ್ತಿಲ ಫೈಟ್ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ನಿನ್ನೆ ಅರುಣ್ ಕುಮಾರ್ ಪುತ್ತಿಲ ಮತ್ತು ಬಿಎಸ್ ವಿಜಯೇಂದ್ರ ಗೌಪ್ಯ ಸಭೆ ನಡೆಸಿದ್ದು ಸಂಧಾನ ಸಫಲವಾಗುತ್ತಿದೆ ಎಂಬ ಅಂಶ ಬಯಲಾಗಿದೆ. 

ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಹಿಂದೂ ಮುಖಂಡ, ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಭೇಟಿಯಾಗಿರುವುದು ನಿಜ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಮೈಸೂರಿನಲ್ಲಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪುತ್ತಿಲ ನನ್ನನ್ನು ಭೇಟಿ ಮಾಡಿದ್ದು ಸತ್ಯ ಎಂದು ಹೇಳಿದ್ದಾರೆ.

ಕರಾವಳಿಯಲ್ಲಿ ಬಿಜೆಪಿ ಸಿಕ್ತು ಅರುಣ ಬಲ

ಕಳೆದೆರಡು ದಿನಗಳಿಂದ ಪುತ್ತಿಲ ಹಾಗೂ ಬಿಜೆಪಿ ನಡುವೆ ಮಾತುಕತೆ ನಡೆದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದವು. ಈಗ ಇದನ್ನು ವಿಜಯೇಂದ್ರರವರೇ ಒಪ್ಪಿಕೊಂಡಿದ್ದು ಮಾತುಕತೆ ನಡೆದಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ. ಬಿಜೆಪಿ ಸೇರ್ಪಡೆ ಇನ್ನೇನು ಕೆಲವೇ ದಿನಗಳಲ್ಲಿ ಅಧೀಕೃತವಾಗಿ ಗ್ರೀನ್ ಸಿಗ್ನಲ್ ಸಿಗಲಿದೆ. ಯಾವುದೇ ಷರತ್ತಿಲ್ಲದೆ ಬಿಜೆಪಿಗೆ ಸೇರ್ಪಡೆಯಾಗಿ ಎಂದು ಅವರಿಗೆ ಸೂಚಿಸಿದ್ದೇನೆ. ಯಾವುದೇ ಷರತ್ತುಗಳು ಬೇಡ. ಪ್ರಧಾನಿ ಮೋದಿ ನಾಯಕತ್ವಕ್ಕಾಗಿ ಎಲ್ಲರೂ ಒಂದಾಗಬೇಕು ಎಂದು ಹೇಳಿದ್ದೇನೆ ಎಂದು ಕೂಡ ತಿಳಿಸಿದ್ದಾರೆ. ಈ ಮೂಲಕ ಯಾವುದೇ ಹುದ್ದೆ ಕೊಟ್ಟು ಪಕ್ಷಕ್ಕೆ ಸೇರ್ಪಡೆಗೊಳಿಸುವುದಿಲ್ಲ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.

ಸ್ಥಾನಮಾನ ಇಲ್ಲದೆ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಅಂದರೆ ವಾರಾಂತ್ಯದಲ್ಲಿ ಬೆಂಗಳೂರಿನಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಬಿಜೆಪಿ ಸೂಚನೆಯಂತೆ ಸಂಧಾನ ನಡೆದಿದೆ. ಸೇರ್ಪಡೆ ಆದ ಬಳಿಕವಷ್ಟೇ ಸ್ಥಾನಮಾನ ನೀಡುವ ಬಗ್ಗೆ ನಿರ್ಧಾರ ಆಗಲಿದೆ. ಪುತ್ತಿಲ ವಿಚಾರವಾಗಿ ದಕ್ಷಿಣ ಕನ್ನಡದ ಸ್ಥಳೀಯ ಮುಖಂಡರ ಜೊತೆ ಚರ್ಚೆ ಮಾಡುತ್ತೇನೆ. ಎಲ್ಲಾ ಕ್ಷೇತ್ರಕ್ಕೂ ನಮಗೆ ಬಿಜೆಪಿ, ಕಮಲ ಚಿಹ್ನೆಯಷ್ಟೇ ಅಭ್ಯರ್ಥಿ. ಬೇರೆ ಯಾವ ಭಿನ್ನಾಭಿಪ್ರಾಯಗಳೂ ನಮ್ಮ ನಡುವೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಬಿಜೆಪಿಗೇ ಗಡುವು ನೀಡಿದ್ದ ಪುತ್ತಿಲ ಪರಿವಾರ

ಪುತ್ತಿಲ ಪರಿವಾರವನ್ನು ಬಿಜೆಪಿ ಜತೆ ವಿಲೀನಗೊಳಿಸಿ ಪಕ್ಷ ಸೇರ್ಪಡೆಯಾಗುವುದಾದರೆ ಸ್ವಾಗತ ಎಂದು ಬಿಜೆಪಿ ನಾಯಕರು ಹೇಳಿದ್ದರು. ಇದರ ಬೆನ್ನಲ್ಲೇ ಪುತ್ತೂರಿನಲ್ಲಿ ಪರಿವಾರದ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಸಿದ್ದ ಪುತ್ತಿಲ, ಲೋಕಸಭಾ ಚುನಾವಣೆಗೂ ಮುನ್ನ ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷ ಸ್ಥಾನ ನೀಡಿದರೆ ಮಾತ್ರ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಹೇಳಿದ್ದರು. ಅಲ್ಲದೆ, ಈ ವಿಚಾರವಾಗಿ 3 ದಿನಗಳ ಒಳಗಾಗಿ ನಿರ್ಧಾರ ತಿಳಿಸಬೇಕು ಎಂದೂ ಬಿಜೆಪಿಗೆ ಗಡುವು ನೀಡಿದ್ದರು. ಇದಾಗಿ ಹಲವು ದಿನಗಳೂ ಕಳೆದೂ ಈ ವಿಚಾರವಾಗಿ ಯಾವುದೇ ಬೆಳವಣಿಗೆ ಆಗಿಲ್ಲ ಎಂಬುದು ಗಮನಾರ್ಹ. ಇದೀಗ ಪುತ್ತಿಲ ಮಾತುಕತೆ ನಡೆಸಿರುವ ಬಗ್ಗೆ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ

ಇದೀಗ ಪುತ್ತಿಲ ಮಾತುಕತೆ ನಡೆಸಿರುವ ಬಗ್ಗೆ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಆದರೇ ಪುತ್ತೂರು ಮಂಡಲ ಅಧ್ಯಕ್ಷ ಸ್ಥಾನ ನೀಡಲೇ ಬೇಕು ಎಂದು ಪಟ್ಟು ಹಿಡಿದಿದ್ದ ಪುತ್ತಿಲ ಬೇಷರತ್ತಾಗಿ ಪಕ್ಷ ಸೇರುತ್ತಾರ ಎಂದು ಕಾದು ನೋಡಬೇಕಿದೆ. ಸದ್ಯ ಆಯೋಧ್ಯೆ ಪ್ರವಾಸದಲ್ಲಿರುವ ಅರುಣ್ ಪುತ್ತಿಲ ಸಂಪರ್ಕಕ್ಕೆ ಲಭಿಸಿಲ್ಲ. ಆ ಬಳಿಕವಷ್ಟೆ ಸ್ಪಷ್ಟ ಚಿತ್ರಣ ಸಿಗಲಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!