ಉಡುಪಿ: ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ವ್ಯಕ್ತಿಗಳು ನಾಪತ್ತೆ
ಮ್ಯಾನೇಜರ್ ಕೆಲಸ ಮಾಡಿಕೊಂಡಿದ್ದಾತ ನಾಪತ್ತೆ
ವಿಪರೀತ ಮದ್ಯಪಾನ ಮಾಡುವ ವ್ಯಕ್ತಿ ನಾಪತ್ತೆ

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಉಡುಪಿಯ ಇಬ್ಬರು ವ್ಯಕ್ತಿಗಳು ನಾಪತ್ತೆಯಾದ ಘಟನೆ ನಡೆದಿದ್ದು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿದೆ. 

ಉಡುಪಿ ನಗರದ ಲಾಡ್ಜ್ ವೊಂದರಲ್ಲಿ ಮ್ಯಾನೇಜರ್ ಕೆಲಸ ಮಾಡಿಕೊಂಡಿದ್ದ ಸೈಯದ್ ಇಮ್ರಾನ್ (41) ಎಂಬವರು ಫೆ.23ರಂದು ಲಾಡ್ಜ್ನಿಂದ ಕೆಲಸದ ನಿಮಿತ್ತ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 170 ಸೆಂ.ಮೀ. ಎತ್ತರ, ದಪ್ಪ ಮೈಕಟ್ಟು, ಎಣ್ಣೆ ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವAತೆ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ಹಿರಿಯಡ್ಕ ನಿವಾಸಿ ವಾಸು ಶೇರಿಗಾರ್ (57) ಎಂಬವರು ಫೆ.22ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!