ಚಾರ್ಮಾಡಿ ಘಾಟಿಯಲ್ಲಿ ಬಸ್ ಬ್ರೇಕ್ ಫೈಲ್; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ
ಚಾರ್ಮಾಡಿ ಘಾಟಿಯಲ್ಲಿ ಬಸ್ ಬ್ರೇಕ್ ಫೈಲ್; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಮಂಗಳೂರಿನತ್ತ ಬರುತ್ತಿದ್ದ KSRTC ಬಸೊಂದರ ಬ್ರೇಕ್ ಫೇಲ್ ಆಗಿ, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ ಕಡೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಬ್ರೇಕ್ ವೈಫಲ್ಯಕ್ಕೀಡಾಗಿದೆ. ಇದನ್ನು ಅರಿತ ಚಾಲಕ ಸಮಯಪ್ರಜ್ಞೆ ಮೆರೆದಿದ್ದು, ರಸ್ತೆಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆಸಿ ಬಸ್ಸನ್ನು ನಿಲ್ಲುವಂತೆ ಮಾಡಿದ್ದಾನೆ. 

ಯಾವುದೋ ಸಮಸ್ಯೆಯಾಗದೆ ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ಬಸ್ ನಿಂತಿದೆ. ಬಸ್ಸಿನಲ್ಲಿದ್ದ 70 ಮಂದಿ ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. 

ಅತ್ಯಂತ ಅಪಾಯಕಾರಿ ತಿರುವುಗಳಿಂದ ಕೂಡಿರುವ ಚಾರ್ಮಾಡಿ ಘಾಟಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ಚಾಲಕ ತೋರಿದ ಸಮಯಪ್ರಜ್ಞೆ ಪ್ರಯಾಣಿಕರ ಜೀವ ಉಳಿಸಿದೆ. ಚಾಲಕನ ಸಕಾಲಿಕ ಕ್ರಮಕ್ಕೆ ಪ್ರಯಾಣಿಕರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!