ನಾಳೆ ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ
(ಮಾ.16) ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ: ಕೇಂದ್ರ ಚುನಾವಣಾ ಆಯೋಗ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಶನಿವಾರ ಪ್ರಕಟಿಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ನಾಳೆ ಮಧ್ಯಾಹ್ನ ಚುನಾವಣಾ ಆಯೋಗವು ಸುದ್ದಿಗೋಷ್ಟಿ ನಡೆಸಿ, ಮತದಾನ ಮತ್ತು ಮತ ಎಣಿಕೆ ದಿನಾಂಕ ಜೊತೆ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಭಾರತೀಯ ಚುನಾವಣಾ ಆಯೋಗವು (ಇಸಿಐ) ಬಹು ನಿರೀಕ್ಷಿತ ಲೋಕಸಭೆ ಚುನಾವಣೆಯ ದಿನಾಂಕವನ್ನು ನಾಳೆ (ಮಾ.16) ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಲಿದೆ.

ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಆಂಧ್ರಪ್ರದೇಶದಲ್ಲಿ ನಿಗದಿಯಾಗಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನೂ ಆಯೋಗವು ಪ್ರಕಟಿಸಲಿದೆ. ಏಳರಿಂದ ಎಂಟು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದೆ ಮೂಲಗಳುನ್ನುಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ. 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!