ಮೀನು ಹಿಡಿಯಲು ಹೋದ ಯುವಕರು ನೀರುಪಾಲು.!
ನೀರಿನ ಸೆಳೆತಕ್ಕೆ ಸಿಲುಕಿ ಯುವಕರಿಬ್ಬರು ನದಿಯಲ್ಲಿ ಮುಳುಗಿ ಮೃತ್ಯು

ಬ್ರಹ್ಮಾವರ : ದೋಣಿಯಲ್ಲಿ ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾನದಿಯಲ್ಲಿ ಮಾ.೨೬ರಂದು ಬೆಳಗ್ಗೆ 9.30ರ ಸುಮಾರಿಗೆ ನಡೆದಿದೆ. 

ಮೃತರನ್ನು ಹೊಸಾಳ ಗ್ರಾಮದ ಶ್ರೀಶ(21) ಹಾಗೂ ಪ್ರಶಾಂತ್ ಪೂಜಾರಿ (30) ಎಂದು ಗುರುತಿಸಲಾಗಿದೆ. 

ಇವರಿಬ್ಬರು ಮೀನು ಹಿಡಿಯಲೆಂದು ನಾಗರಮಠದ ಸೀತಾನದಿಗೆ ದೋಣಿಯಲ್ಲಿ ತೆರಳಿದ್ದರು. ಅಲ್ಲಿ ಇವರು ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ನೀರಿಗೆ ಬಿದ್ದರೆನ್ನಲಾಗಿದೆ. ಕೂಡಲೇ ಸ್ಥಳೀಯರು ಮುಳುಗುತ್ತಿರುವ ಇವರ ರಕ್ಷಣೆಗೆ ಧಾವಿಸಿದರು. ಆದರೆ ನೀರಿನ ಸೆಳೆತದಿಂದಾಗಿ ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಬಳಿಕ ಅಗ್ನಿಶಾಮಕ ದಳ, ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಸ್ಥಳೀಯರ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!