ಕಾರ್ಕಳ: ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ಸತತ ಮೂರನೇ ವರ್ಷವೂ 100% ಫಲಿತಾಂಶ
ವಾಣಿಜ್ಯ ವಿಭಾಗದಲ್ಲಿ ಸಾನ್ವಿ ರಾವ್ 3ನೇ ರ‍್ಯಾಂಕ್‌

ಕಾರ್ಕಳ: 2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ಸತತ ಮೂರನೇ ವರ್ಷವೂ ಶೇ. 100 ಫಲಿತಾಂಶ ದೊರಕಿದೆ. 

ಪರೀಕ್ಷೆಗೆ ಕುಳಿತ ಎಲ್ಲಾ 582 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆ ಗೈದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಿಂಚನ ಆರ್‌. ಹೆಚ್ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ‍್ಯಾಂಕ್‌ , ಹಂಸಿನಿ ವಿ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್‌, ಸುಜಿತ್‌ ಡಿ.ಕೆ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್‌, ಸಮೀಕ್ಷಾ ಎಸ್‌ 591 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ರ‍್ಯಾಂಕ್‌, ಪ್ರೇಮ್‌ ಸಾಗರ್‌ ಪಟೀಲ್‌ 589 ಅಂಕಗಳೊಂದಿಗೆ ರಾಜ್ಯಕ್ಕೆ 10 ನೇ ರ‍್ಯಾಂಕ್‌, ವರ್ಷ ಹೆಚ್. ವಿ 589 ಅಂಕಗಳೊಂದಿಗೆ ರಾಜ್ಯಕ್ಕೆ 10 ನೇ ರ‍್ಯಾಂಕ್‌ ಗಳಿಸಿದ್ದಾರೆ. 

ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸಾನ್ವಿ ರಾವ್‌ 595 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ಸ್ಥಾನ, ಭಕ್ತಿ ಕಾಮತ್‌ 592 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ, ಎ.‌ ಎಸ್. ಚಿನ್ಮಯ 592 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ ಹಾಗೂ ಎ ಅನನ್ಯಾ ಜೈನ್‌ 589 ಅಂಕಗಳೊಂದಿಗೆ ರಾಜ್ಯಕ್ಕೆ 9 ನೇ ಸ್ಥಾನ ಗಳಿಸಿದ್ದಾರೆ. ಒಟ್ಟು ಪರೀಕ್ಷೆಗೆ ಹಾಜರಾದ 582 ವಿದ್ಯಾರ್ಥಿಗಳಲ್ಲಿ , 141 ವಿದ್ಯಾರ್ಥಿಗಳು 95 ಶೇಕಡಾ ಕ್ಕಿಂತ ಅಧಿಕ, 291 ವಿದ್ಯಾರ್ಥಿಗಳು 90 ಶೇಕಡಾ ಕ್ಕಿಂತ ಅಧಿಕ, 469 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ ಉಳಿದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.

ರಸಾಯನಶಾಸ್ತ್ರದಲ್ಲಿ 24, ಗಣಿತದಲ್ಲಿ 58, ಜೀವಶಾಸ್ತ್ರದಲ್ಲಿ 33, ಗಣಕ ವಿಜ್ಞಾನದಲ್ಲಿ 44, ಅರ್ಥಶಾಸ್ತ್ರದಲ್ಲಿ 03, ವ್ಯವಹಾರ ಅಧ್ಯಯನದಲ್ಲಿ 03, ಲೆಕ್ಕಶಾಸ್ತ್ರದಲ್ಲಿ   14,   ಕನ್ನಡದಲ್ಲಿ 10, ಸಂಸ್ಕೃತದಲ್ಲಿ 40 ವಿದ್ಯಾರ್ಥಿಗಳು ವಿಷಯವಾರು ನೂರಕ್ಕೆ ನೂರು ಅಂಕ ಗಳಿಸಿ ವಿಶೇಷ ಸಾಧನೆಗೈದಿದ್ದಾರೆ. 

ಸಂಸ್ಥೆ ಪ್ರಾರಂಭವಾದ ಮೊದಲ ವರ್ಷದಿಂದಲೂ ಶೇಕಡಾ 100 ಫಲಿತಾಂಶ ದಾಖಲಿಸುವುದರೊಂದಿಗೆ ರಾಜ್ಯದಲ್ಲೇ ಮುಂಚೂಣಿ ಸ್ಥಾನದಲ್ಲಿದೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ಉಪನ್ಯಾಸಕೇತರ ವೃಂದದವರು ಸಂತಸ ವ್ಯಕ್ತಪಡಿಸಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!