ಉಡುಪಿ: ಬೈಕ್ ಅಪಘಾತ - ಯುವಕ ಸ್ಪಾಟ್ ಡೆತ್.!
ಡಿವೈಡರ್‌ ಗೆ ಬೈಕ್ ಢಿಕ್ಕಿ - ಯುವಕ ಮೃತ್ಯು

ಉಡುಪಿ: ಬೈಕ್ ಸ್ಕಿಡ್ ಆಗಿ ಡಿವೈಡರ್‌ ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ಸಂಭವಿಸಿದೆ.

ಮೃತ ಯುವಕನನ್ನು ಕೋಟ ಮಣೂರು ನಿವಾಸಿ ವಿಕಾಸ್ ಆಚಾರ್ಯ (22) ಎಂದು ಗುರುತಿಸಲಾಗಿದೆ.

ಸೋಮವಾರ ರಾತ್ರಿ 1:30 ರ ಸುಮಾರಿಗೆ ಸಾಸ್ತಾನ ದಿಂದ ಕೋಟ ಮಣೂರು ಕಡೆ ಬರುತ್ತಿದ್ದ ವೇಳೆ ಕೋಟ ಗುಜಿರಿ ಅಂಗಡಿ ಸಮೀಪ ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಹೆದ್ದಾರಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ವಿಕಾಸ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ‌ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!