ಮಂಗಳೂರು: ಲೋಕಸಭಾ ಚುನಾವಣೆ - ಈ ನಾಲ್ಕು ದಿನ ಮದ್ಯ ಮಾರಾಟ ನಿಷೇಧ.!!
ಮತದಾನ, ಮತ ಎಣಿಕೆ ದಿನಗಳಲ್ಲಿ ಮದ್ಯ ಮಾರಾಟ ನಿಷೇಧ- ಜಿಲ್ಲಾಧಿಕಾರಿ

ಮಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ  ಮತದಾನ, ಮತ ಎಣಿಕೆ ದಿನಗಳಲ್ಲಿ ಮದ್ಯ ಮಾರಾಟ ನಾಲ್ಕು ದಿನ ನಿಷೇಧ ದಿನಗಳು ಎಂದು ಘೋಷಿಸಲಾಗಿದೆ.

ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆಯ ದಿನ ಜೂನ್ 3ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4ರಂದು ಮಧ್ಯರಾತ್ರಿ 12 ಗಂಟೆಯವರೆಗಿನ ಅವಧಿಯನ್ನು ಮಧ್ಯಮುಕ್ತ ದಿನಗಳು ಎಂದು ಘೋಷಿಸಲಾಗಿದೆ.

ಆ ದಿನಗಳಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿಗಳು, ಮದ್ಯ ಮಾರಾಟ ಡಿಪೆೀಗಳು, ಮದ್ಯ ತಯಾರಿಕಾ ಡಿಸ್ಟಿಲರಿಗಳು, ಸ್ಟಾರ್ ಹೋಟೆಲ್ ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶ ಹೊರಡಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!