ನಾಳೆ ಆರೋಗ್ಯ ರಕ್ಷಾ ತುರ್ತು ಸಹಾಯನಿಧಿ ಲೋಕಾರ್ಪಣೆ
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಆರೋಗ್ಯ ರಕ್ಷಾ ಕಾರ್ಯಕ್ರಮದ ತುರ್ತು ಸಹಾಯನಿಧಿಯ ಉದ್ಘಾಟನೆ ನಾಳೆ(ಸೆಪ್ಟೆಂಬರ್ 15) ನಡೆಯಲಿದೆ.

ನಾಳೆ ಆರೋಗ್ಯ ರಕ್ಷಾ ತುರ್ತು ಸಹಾಯನಿಧಿ ಲೋಕಾರ್ಪಣೆ

 ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಆರೋಗ್ಯ ರಕ್ಷಾ ಕಾರ್ಯಕ್ರಮದ ತುರ್ತು ಸಹಾಯನಿಧಿಯ ಉದ್ಘಾಟನೆ ನಾಳೆ(ಸೆಪ್ಟೆಂಬರ್ 15) ನಡೆಯಲಿದೆ.

 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಮತ್ತು ಅವರ ಕುಟುಂಬಕ್ಕೆ ಸಂಪೂರ್ಣ ಸುರಕ್ಷಾ ಕಾರ್ಯಕ್ರಮ 2002ರಲ್ಲಿ ಪ್ರಾರಂಭಿಸಲಾಗಿತ್ತು. ಈಗ 8.75 ಲಕ್ಷ ಸದಸ್ಯರು ನೋಂದಣಿಯಾಗಿದ್ದಾರೆ. ಸ್ವಸಹಾಯ ಸಂಘಗಳ ಸದಸ್ಯರಿಗೆ ಆರೋಗ್ಯ ರಕ್ಷಾ ಆಸ್ಪತ್ರೆ ವೆಚ್ಚದ ವಿಮೆ ಕಳೆದ ವರ್ಷ ಪ್ರಾರಂಭಿಸಲಾಗಿದೆ. ಆರೋಗ್ಯ ರಕ್ಷಾ ಕಾರ್ಯಕ್ರಮದಲ್ಲಿ 27.62 ಲಕ್ಷ ಕುಟುಂಬಗಳ 50 ಲಕ್ಷ ಸದಸ್ಯರು ನೋಂದಣಿಯಾಗಿದ್ದಾರೆ. ಆರೋಗ್ಯ ರಕ್ಷಾ ಫಲಾನುಭವಿಗಳಿಗೆ ಕ್ಯಾನ್ಸರ್, ಹೃದಯಾಘಾತ, ಕಿಡ್ನಿ ವೈಫಲ್ಯ, ಹೆಡ್ ಇಂಜುರಿ ಮುಂತಾದ ಸಮಸ್ಯೆಗಳಿಗೆ ಆರೋಗ್ಯ ರಕ್ಷಾ ವಿಮೆಗಿಂತ ಹೆಚ್ಚುವರಿ ವಿಮಾ ಮೊತ್ತ ದೊರೆಯುವಂತೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕ ಪುರುಷೋತ್ತಮ ಪಿ.ಕೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ನಾಳೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್ ಮುಂತಾದವರು ಭಾಗವಹಿಸಲಿದ್ದಾರೆ.

You may also like

Comments

https://newsdaksha.online/assets/images/user-avatar-s.jpg

0 comment

Write the first comment for this!