ಡಾ.ಅಣ್ಣಯ್ಯ ಕುಲಾಲ್‌ಗೆ ಗೌರವ ಸನ್ಮಾನ, ಅದ್ದೂರಿ ಮೆರವಣಿಗೆ
ಸೆ.18ರಂದು ಕುಲಾಲ ಸಂಘ ಪದಗ್ರಹಣ

ಸೆ.18ರಂದು ಕುಲಾಲ ಸಂಘ ಪದಗ್ರಹಣ

 ಡಾ.ಅಣ್ಣಯ್ಯ ಕುಲಾಲ್‌ಗೆ ಗೌರವ ಸನ್ಮಾನ, ಅದ್ದೂರಿ ಮೆರವಣಿಗೆ

 ಸುರತ್ಕಲ್: ಕರ್ನಾಟಕ ರಾಜ್ಯ ಕುಲಾಲ- ಕುಂಬಾರರ ಯುವವೇದಿಕೆ ವತಿಯಿಂದ ಕುಲಾಲ ಸಂಘಗಳ ರಾಜ್ಯ, ವಿಭಾಗ, ಜಿಲ್ಲಾಮಟ್ಟದ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ ಕಾರ್ಯಕ್ರಮ ಸೆಪ್ಟೆಂಬರ್ 18ರಂದು ಭಾನುವಾರ ಸಂಜೆ 4.30ಕ್ಕೆ ಸುರತ್ಕಲ್ ಕುಲಾಲ ಭವನದಲ್ಲಿ ನಡೆಯಲಿದೆ.

 ಸಣ್ಣ ನೀರಾವರಿ ಇಲಾಖೆಯ ನಿವೃತ್ತ ಕಾರ್ಯದರ್ಶಿ, ಸರ್.ಎಂ ವಿಶ್ವೇಶ್ವರಯ್ಯ ಪ್ರಶಸ್ತಿ ಪುರಸ್ಕೃತ ಶ್ರೀನಿವಾಸ್ ಆರ್ ಸಭಾಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಮಂಗಳೂರು ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ಸುರೇಶ್ ಕುಲಾಲ್ ಮತ್ತು ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘ ಪೆರ್ಡೂರಿನ ಸಂತೋಷ್ ಕುಲಾಲ್ ಪಕ್ಕಾಲು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ರಾಜ್ಯ ಸರ್ಕಾರದ ಪ್ರತಿಷ್ಠಿತ ದೇವರಾಜ ಅರಸು ರಾಜ್ಯ ಪುರಸ್ಕಾರ ಪಡೆದ ಡಾ.ಅಣ್ಣಯ್ಯ ಕುಲಾಲ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು. ಕುಲಾಲ ಕುಂಬಾರರ ಯುವವೇದಿಕೆಯ ರಾಜ್ಯಾಧ್ಯಕ್ಷರಾದ ತೇಜಸ್ವಿರಾಜ್, ಕುಲಾಲ ಕುಂಬಾರರ ಯುವವೇದಿಕೆಯ ಕಾರ್ಯದರ್ಶಿ ಹರೀಶ್ ಕಾರಿಂಜ, ಕುಲಾಲ ಕುಂಬಾರರ ಯುವವೇದಿಕೆಯ ಕಾರ್ಯದರ್ಶಿ ನಿಯೋಜಿತ ರಾಜ್ಯಾಧ್ಯಕ್ಷರಾದ ಗಂಗಾಧರ ಬಂಜನ್, ನಿಯೋಜಿತ ರಾಜ್ಯ ಕಾರ್ಯದರ್ಶಿ ಜಯೇಶ್ ಗೋವಿಂದ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ.

 ವೈಭವದ ಮೆರವಣಿಗೆ

 ಪ್ರತಿಷ್ಠಿತ ದೇವರಾಜ ಅರಸು ರಾಜ್ಯ ಪ್ರಶಸ್ತಿ ಪಡೆದ ಡಾ.ಅಣ್ಣಯ್ಯ ಕುಲಾಲ್ ಅವರನ್ನು ಭಾನುವಾರ ಮಧ್ಯಾಹ್ನ 3.30ಕ್ಕೆ ವೈಭವದ ಮೆರವಣಿಗೆಯಲ್ಲಿ ಕರೆತರಲಾಗುವುದು ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ. 3.30ಕ್ಕೆ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಆಗಿ ವಾಹನ ಜಾಥಾ ನಡೆಸಲಾಗುವುದು. ಜಾಥಾದಲ್ಲಿ ಸಾಗುತ್ತ ಕೆಳಗಿನ ಮಾರಿಗುಡಿಯಾಗಿ ಸುರತ್ಕಲ್ ಕುಲಾಲ ಸಂಘಕ್ಕೆ ಅತಿಥಿ ಗಣ್ಯರನ್ನು ಕರೆತರಲಾಗುವುದು. 4.30ರಿಂದ ಪದಗ್ರಹಣ ಹಾಗೂ ಸನ್ಮಾನ ಕಾರ್ಯಕ್ರಮ ನೆರವೇರಲಿದೆ. ಮೆರವಣಿಗೆಯಲ್ಲಿ ಸ್ಥಳೀಯ ಹಲವಾರು ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

 

 ಉತ್ತಮ ವೈದ್ಯ, ಸಮಾಜ ವಿಜ್ಞಾನಿ

 ಡಾ.ಅಣ್ಣಯ್ಯ ಕುಲಾಲ್ ಉಡುಪಿ ಜಿಲ್ಲೆಯ ಕೋಟ ಬಳಿಯ ತೆಕ್ಕಟ್ಟೆಯಲ್ಲಿ 1970ರ ಜೂನ್ 1ರಂದು ಜನಿಸಿದರು. ಉಳ್ತೂರು ಮತ್ತು ಕೆದೂರು ಗ್ರಾಮಗಳಲ್ಲಿ ಪ್ರಾಥಮಿಕ- ಪ್ರೌಢ ಶಿಕ್ಷಣ ಪಡೆದು ಮುಂದೆ ಕುಂದಾಪುರದ ಭಂಡಾರ್‌ಕಾರ್ಸ್‌ ಕಾಲೇಜಿನಲ್ಲಿ ಬಿ.ಎಸ್ಸಿ ಪದವಿ, ಕಸ್ತೂರ್‌ಬಾ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್, ಅಲಗಪ್ಪ ವಿವಿಯಿಂದ ಎಂಬಿಎ ಪದವಿ ಪಡೆದಿದ್ದಾರೆ. ಸಮಾಜಮುಖಿ, ಜಾತ್ಯತೀತ ಚಿಂತನೆಯಿಂದ ಬಡವರ, ನೊಂದವರ, ನಿರ್ಗತಿಕರಿಗೆ ವೈದ್ಯಕೀಯ ಸೇವೆ ನೀಡುವ ಮೂಲಕ ಕರಾವಳಿ-ಮಲೆನಾಡು ಸಹಿತ ರಾಜ್ಯದಲ್ಲಿಯೇ ಉತ್ತಮ ವೈದ್ಯ ಹಾಗೂ ಸಮಾಜ ವಿಜ್ಞಾನಿ ಎಂದು ಗುರುತಿಸಿಕೊಂಡಿದ್ದಾರೆ. ಶ್ರೀನಿವಾಸ ವಿಶ್ವವಿದ್ಯಾಲಯ ಹಾಗೂ ಶ್ರೀನಿವಾಸ ಮೆಡಿಕಲ್ ಕಾಲೇಜಿನಲ್ಲಿ ವೈದ್ಯರಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಇವರು ಪ್ರಸ್ತುತ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯಡಿ ವೆನ್‌ಲಾಕ್ ಆಸ್ಪತ್ರೆಯಲ್ಲಿ ಕ್ಯಾನ್ಯರ್ ಸಂಬಂಧಿತ ಪ್ಯಾಲಿಯೇಟೀವ್ ವಿಭಾಗದಲ್ಲಿ ಬಡವರಿಗೆ ವೈದ್ಯಕೀಯ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜಮುಖಿ ಸೇವೆಗಾಗಿ ಡಾ.ಬಿ.ಸಿ.ರಾಯ್ ಜೀವಮಾನ ಸಾಧನೆ ಪ್ರಶಸ್ತಿ, ರಾಷ್ಟ್ರೀಯ ಐಎಂಎ ಪ್ರಶಸ್ತಿಗಳು ಲಭಿಸಿವೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!