ಸುಬ್ರಮಣ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿಧನ...
ಸುಬ್ರಹ್ಮಣ್ಯ: ಇಂದು ಮುಂಜಾನೆ ಹೃದಯಾಘಾತದಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಯು.ಡಿ. ಶೇಖರ್ ರವರು ನಿಧನರಾಗಿದ್ದಾರೆ.

ಇಂದು ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ಮನೆಯವರು ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತಂದರಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.

ಶೇಖರ್ ರವರು‌ ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ದೀರ್ಘ ಕಾಲ ಸೇವೆ ಸಲ್ಲಿದ್ದ ಬಳಿಕ ಸುಬ್ರಹ್ಮಣ್ಯ ಗ್ರಾ.ಪಂ. ಪಿಡಿಒ ಆಗಿ ವರ್ಗಾವಣೆ ಯಾಗಿದ್ದರು. ಮೃತರು ಪತ್ನಿ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೀತಾ ಶೇಖರ್, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!