ಮಂಗಳೂರು : ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ...!!
ಮಂಗಳೂರು : ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ...!!

2021-22ನೇ ಸಾಲಿನ ಶೈಕ್ಷಣಿಕ ವರ್ಷದ ಬಾಕಿಯಿರುವ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಹಾಗೂ UUCMS ತಂತ್ರಾಂಶವನ್ನು ಸರಿಪಡಿಸಿ ಫಲಿತಾಂಶವನ್ನು ಪ್ರಕಟಿಸುವಂತೆ ಆಗ್ರಹಿಸಿ ಎಬಿವಿಪಿ ಗುರುವಾರ ನಗರದ ಮಹಾನಗರ ಪಾಲಿಕೆಯ ಮುಂಭಾಗ ಪ್ರತಿಭಟನೆ ನಡೆಸಿತು...

ಮತ್ತು ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು... ಆದಷ್ಟು ಬೇಗನೆ ಸಮಸ್ಯೆಯನ್ನು ಸರಿಪಡಿಸಿ ಫಲಿತಾಂಶವನ್ನು ಪ್ರಕಟಿಸದೇ ಇದ್ದಲ್ಲಿ ಎಬಿವಿಪಿ ಮತ್ತೆ ಉಗ್ರ ಹೋರಾಟ ನಡೆಸಲಿದೆ ಎಂದು ತಿಳಿಸಿದೆ...

ಲಕ್ಷಾಂತರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿ ವರ್ಷ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ ತಮ್ಮ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನದಿಂದ ಬರುವ ಹಣವನ್ನು ಪೂರಕವಾಗಿ ಬಳಸಿಕೊಳ್ಳುತ್ತಿದ್ದರು... ಆದರೆ ಈ ಬಾರಿ, ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿಯನ್ನು ಸಲ್ಲಿಸಿದ ನಂತರ ಈ ತಂತ್ರಾಂಶದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆ ಆಗಿರುವುದು ನಮೂದಿಸಲಾಗಿದೆ... ಆದರೆ ಬಹುತೇಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ದೊರೆತಿರುವುದಿಲ್ಲ...

ಈ ಕೂಡಲೇ ಸರಕಾರವು ಈ ವಿದ್ಯಾರ್ಥಿಗಳಿಗೆ ನೀಡಬೇಕಾದ ವಿದ್ಯಾರ್ಥಿ ವೇತನದ ಹಣವನ್ನು ಬಿಡುಗಡೆಗೊಳಿಸಬೇಕಾಗಿ ಹಾಗೂ ಈ ವಿದ್ಯಾರ್ಥಿ ವೇತನದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆಯೂ ಸೂಕ್ತ ತನಿಖೆ ನಡೆಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿತು...

ನೆಪ ಜಾರಿಯಾದ ನಂತರ ಎಲ್ಲಾ ವಿಶ್ವವಿದ್ಯಾನಿಲಯಗಳು UUCMS ತಂತ್ರಾಂಶವನ್ನು ಬಳಸಿ, ದಾಖಲಾತಿಯಿಂದ ಫಲಿತಾಂಶದವರೆಗೆ ಎಲ್ಲಾ ರೀತಿಯ ಮಾಹಿತಿಗಳನ್ನು ಇದರ ಮೂಲಕವೇ ನಮೂದಿಸಬೇಕಾಗಿದೆ... ಆದರೆ ಈ ತಂತ್ರಾಂಶದಲ್ಲಿರುವ ಕೆಲವು ಸಮಸ್ಯೆಗಳಿಂದ, ಹಾಸ್ಟೆಲ್ ಗೆ ಅರ್ಜಿ ಸಲ್ಲಿಸಲು, ಬೇರೆ ಕಾಲೇಜಿಗೆ ವರ್ಗಾವಣೆ ಪಡೆಯಲು, ವಿದ್ಯಾರ್ಥಿ ವೇತನಗಳಿಗೆ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಿದೆ...

ವಿಶ್ವ ವಿದ್ಯಾಲಯಗಳು ಸರಿಯಾದ ರೀತಿಯಲ್ಲಿ ಫಲಿತಾಂಶವನ್ನು ನೀಡದೆ ಇರುವುದರಿಂದ ಹಲವಾರು ರೀತಿಯ ಸಮಸ್ಯೆಗಳನ್ನು ವಿದ್ಯಾರ್ಥಿ ಸಮೂಹ ಎದುರಿಸುತ್ತಿದ್ದು ಈ ಕೂಡಲೇ ಅವುಗಳನ್ನು ಬಗೆಹರಿಸುವಂತೆ ವಿದ್ಯಾರ್ಥಿ ಪರಿಷತ್ ಆಗ್ರಹಿಸಿತು...

ಹೋರಾಟದ ನೇತೃತ್ವವನ್ನು ಎಬಿವಿಪಿ ರಾಜ್ಯ ಕಾರ್ಯದರ್ಶಿ ಮಣಿಕಂಠ ಕಳಸ, ಜಿಲ್ಲಾ ಸಂಚಾಲಕರಾದ ಶ್ರೇಯಸ್ ಶೆಟ್ಟಿ ವಹಿಸಿದ್ದರು...


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!