ಮಳಲಿ ಮಸೀದಿ ತೀರ್ಪು ಪ್ರಕಟ; ವಿಶ್ವ ಹಿಂದೂ ಪರಿಷತ್‌ಗೆ ಮೊದಲ ಗೆಲುವು
ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ.!

ಮಂಗಳೂರು: ಮಳಲಿ ಮಸೀದಿಯಲ್ಲಿ ಕರಾವಳಿಯಲ್ಲಿ ಹೊಸ ಸಂಚಲನ ಮೂಡಿಸಿದ ಪ್ರಕರಣ. ಮಸೀದಿ ಕೆಡವಿದಾಗ ಅಲ್ಲಿ ದೇಗುಲದ ಮಾದರಿಯಲ್ಲಿ ರಚನೆ ಕಂಡುಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯವು ಇಂದು ಮಹತ್ವದ ತೀರ್ಪು ನೀಡಿದ್ದು ವಿಶ್ವ ಹಿಂದೂ ಪರಿಷತ್‌ಗೆ ಮೊದಲ ಗೆಲುವು ಲಭಿಸಿದೆ.

ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಬಳಿ ದರ್ಗಾವನ್ನು ನವೀಕರಣಕ್ಕಾಗಿ ಕೆಡವಿದಾಗ ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು. ಮಳಲಿ ಮಸೀದಿ ಜಾಗದಲ್ಲಿ ಕೋರ್ಟ್ ಕಮಿಷನರ್ ಮೂಲಕ ಸರ್ವೆ ನಡೆಸಲು ಆದೇಶ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಸಲ್ಲಿಸಿತ್ತು. ಈಗ ಸಿವಿಲ್ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ ಮಾಡಿದೆ. ಸೀವಿಲ್‌ ಕೋರ್ಟ್‌ ವ್ಯಾಪ್ತಿಯಲ್ಲಿ ಮುಂದಿನ ವಿಚಾರಣೆ ಜನವರಿ ೮ಕ್ಕೆ  ಮುಂದುಡಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!