ಟಿ20 ವಿಶ್ವಕಪ್: 7 ವಿಕೆಟ್‌ಗಳಿಂದ ಗೆಲುವು ಸಾಧಿಸಿ, ಫೈನಲ್‌ಗೆ ಎಂಟ್ರಿ ಕೊಟ್ಟ ಪಾಕಿಸ್ತಾನ
ನ್ಯೂಜಿಲೆಂಡ್ ವಿರುದ್ದ 7 ವಿಕೆಟ್‌ಗಳಿಂದ ಗೆಲುವು ಸಾಧಿಸಿದ ಪಾಕಿಸ್ತಾನ

ಇಂದು ನಡೆದ 2022ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡವು ನ್ಯೂಜಿಲೆಂಡ್ ವಿರುದ್ದ 7 ವಿಕೆಟ್‌ಗಳಿಂದ ಗೆಲುವು ಸಾಧಿಸಿ, ಫೈನಲ್‌ಗೆ ಎಂಟ್ರಿ ಕೊಟ್ಟಿದೆ.

ಆರಂಭಿಕರಾದ ಮೊಹಮ್ಮದ್ ರಿಜ್ವಾನ್ ಹಾಗೂ ಬಾಬರ್ ಆಜಂ ಅರ್ಧಶತಕದ ಸಹಾಯದಿಂದ ಪಾಕಿಸ್ತಾನ ತಂಡವು ನ್ಯೂಜಿಲೆಂಡ್ ವಿರುದ್ದ 7 ವಿಕೆಟ್‌ಗಳಿಂದ ಗೆಲುವು ಸಾಧಿಸಿ, 2022ರ ಟಿ20 ವಿಶ್ವಕಪ್ ಟೂರ್ನಿಯ ಫೈನಲ್‌ಗೆ ಎಂಟ್ರಿ ಕೊಟ್ಟಿದೆ. ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯನ್ಸನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡವು 4 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿದೆ. ಡೇರಿಲ್ ಮಿಚೆಲ್ 53 ರನ್ ಹಾಗೂ ನಾಯಕ ಕೇನ್ ವಿಲಿಯಮ್ನನ್ 46 ರನ್ ಗಳಿಸಿದ್ದರು.

153 ರನ್‌ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡವು 19.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿ ಗೆಲುವು ಸಾಧಿಸಿತು. ಪಾಕಿಸ್ತಾನದ ಪರ ಆರಂಭಿಕ ಜೋಡಿಗಳಾದ ಮೊಹಮ್ಮದ್ ರಿಜ್ವಾನ್ 57 ರನ್ ಹಾಗೂ ಬಾಬರ್ ಆಜಂ 53 ರನ್ ಗಳಿಸಿದರೆ, ಮೊಹಮ್ಮದ್ ಹಾರಿಸ್ 30 ರನ್ ದಾಖಲಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. 2022ರ ಟಿ20 ವಿಶ್ವಕಪ್ ಟೂರ್ನಿಯ ಭಾಗವಾಗಿ ನಾಳೆ (ಗುರುವಾರ) ಭಾರತ ಹಾಗೂ ಇಂಗ್ಲೆಂಡ್ ನಡುವೆ ಎರಡನೇ ಸೆಮಿಫೈನಲ್ ಪಂದ್ಯವು ನಡೆಯಲಿದೆ. ಇದರಲ್ಲಿಗೆಲುವು ಸಾಧಿಸುವ ತಂಡವು ಪಾಕಿಸ್ತಾನದ ವಿರುದ್ಧ ಫೈನಲ್ ಫೈಟ್ ನಡೆಸಲಿದೆ.

 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!