ಪುತ್ತೂರು: ವಸತಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ನಾಪತ್ತೆ
ಇಬ್ಬರು ವಿದ್ಯಾರ್ಥಿಗಳು ನಾಪತ್ತೆ

ಪುತ್ತೂರು : ಪ್ರತಿಷ್ಠಿತ ವಸತಿ ಶಾಲೆಯೊಂದರ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. 

ನಾಪತ್ತೆಯಾದವರನ್ನು 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ತಿಪ್ಪೇಶ್(15) ಮತ್ತು ಅಭಿಷೇಕ್(15) ಎನ್ನಲಾಗಿದ್ದು, ಇವರು ನ.7 ರ ಸಂಜೆಯಿಂದ ಕಾಣೆಯಾಗಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ.

ಈ ಇಬ್ಬರು ವಿದ್ಯಾರ್ಥಿಗಳು ಮೈಸೂರು ಮೂಲದವರಾಗಿದ್ದು, ಸಂಜೆ ಹೊತ್ತು ಶಾಲೆಯಲ್ಲಿದ್ದರು. ನಂತರ ತಮ್ಮ ವಸತಿ ನಿಲಯಕ್ಕೆ ಹೋಗದೆ ಶಾಲೆ ಬಿಡುವ ಸಂದರ್ಭ ಪುತ್ತೂರು ಪೇಟೆಗೆ ಬಂದು ರೈಲು ನಿಲ್ದಾಣಕ್ಕೆ ತೆರಳಿರುವುದಾಗಿ ತಿಳಿದು ಬಂದಿದೆ. ಕೂಡಲೇ ಶಾಲಾ ಆಡಳಿತ ಮಂಡಳಿಯವರು ಮಕ್ಕಳ ಮನೆಯವರಿಗೆ ಕರೆ ಮಾಡಿ ಕೇಳಿದಾಗ, ಅವರು ಮನೆಗೂ ಬಂದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಹಾಗಾಗಿ ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!