ಮಂಗಳೂರು: ಬಾಂಬ್ ಸ್ಫೋಟಗೊಂಡ ಸ್ಥಳ ಪರಿಶೀಲಿಸಿದ ಅರಗ ಜ್ಞಾನೇಂದ್ರ ; ಆಟೋಚಾಲಕನಿಗೆ ಗೃಹಸಚಿವರಿಂದ ಹಣಕಾಸಿನ ನೆರವು
ಗಾಯಗೊಂಡಿದ್ದ ಆಟೋಚಾಲಕನಿಗೆ ಹಣಕಾಸಿನ ನೆರವು

ಮಂಗಳೂರು ನಗರದ ನಾಗುರಿಯಲ್ಲಿ ಆಟೋದಲ್ಲಿ ಉಗ್ರಗಾಮಿ ಸಾಗಿಸುತ್ತಿದ್ದ ಬಾಂಬ್ ಸ್ಫೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಶಾಸಕ ಡಾ.ವೈ ಭರತ್ ಶೆಟ್ಟಿಯವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಆ ಬಳಿಕ ಆಟೋ ರಿಕ್ಷಾ ಚಾಲಕ ಪುರುಷೋತ್ತಮ್ ಪೂಜಾರಿ ಅವರ ಆರೋಗ್ಯ ವಿಚಾರಿಸಲು ಗೃಹಸಚಿವರು ಶಾಸಕ ಡಾ.ವೈ ಭರತ್ ಶೆಟ್ಟಿಯವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದರು. ಈ ವೇಳೆ ವೈಯುಕ್ತಿಕವಾಗಿ 50 ಸಾವಿರ ಧನ ಸಹಾಯ ಮಾಡಿದ್ದಾರೆ.

ಆಟೋ ರಿಕ್ಷಾದಲ್ಲಿ ಬಾಂಬ್ ಸ್ಪೋಟ ನಡೆದ ಸ್ಥಳಕ್ಕೆ ಪೊಲೀಸ್ ಆಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೃಹ ಸಚಿವರು ಬಳಿಕ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋಚಾಲಕನನ್ನು ಬೇಟಿ ಮಾಡಿ ಚಿಕಿತ್ಸೆ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ಗೃಹ ಸಚಿವರು ವೈಯಕ್ತಿಕವಾಗಿ 50 ಸಾವಿರ ರೂ. ಧನಸಹಾಯ ನೀಡಿದರು. ಅಲ್ಲದೇ ಚಿಕಿತ್ಸೆಯ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರಕರಣದ ಆರೋಪಿ ಶಾರೀಕ್ ನ ಆರೋಗ್ಯದ ಕುರಿತು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದು ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ, ಜಿಲ್ಲಾಧಿಕಾರಿ ರವಿಕುಮಾರ್, ಪೊಲೀಸ್ ಕಮೀಷನರ್ ಶಶಿಕುಮಾರ್ ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!