ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆ
ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆ

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಡಿಸೆಂಬರ್ 9ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಕೊಡಗು, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ.

ಡಿಸೆಂಬರ್ 9ರಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ 13.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಆವರಿಸುವ ಸಾಧ್ಯತೆ ಇದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!