ಬೆಳ್ಳೆ ಗ್ರಾ. ಪಂ 'ಜನಸ್ಪಂದನ ಕಾರ್ಯಕ್ರಮ...
ಬೆಳ್ಳೆ ಗ್ರಾ. ಪಂ 'ಜನಸ್ಪಂದನ ಕಾರ್ಯಕ್ರಮ' ಜನರ ಅಹವಾಲು ಸ್ವೀಕರಿಸಿದ : ಶಾಸಕ ಲಾಲಾಜಿ ಮೆಂಡನ್.

ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಕ್ಷೇತ್ರದ ಪ್ರತಿ ಪಂಚಾಯತ್ ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದು ಇಂದು ಬೆಳ್ಳೆ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಇಲ್ಲಿನ ಗೀತಾ ಮಂದಿರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ವಿವಿಧ ಇಲಾಖೆ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಾರ್ವಜನಿಕರ  ಅಹವಾಲು ಸ್ವೀಕರಿಸಲಾಯಿತು

        ಬೆಳ್ಳೆ ಪಂಚಾಯತ್ ವ್ಯಾಪ್ತಿಯ ಹಲವಾರು ವರ್ಷಗಳಿಂದ ಬಾಕಿ ಉಳಿದಿದ್ದ ಹಕ್ಕುಪತ್ರಗಳನ್ನು ವಿಶೇಷ ಮುತುವರ್ಜಿ ಯಿಂದ 28 ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ, ಬಸವ ವಸತಿ ಹಾಗೂ ಅಂಬೇಡ್ಕರ್ ನಿಗಮದ ವಸತಿ ಯೋಜನೆಯಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಮನೆ ಮಂಜೂರಾತಿಯ ಮಂಜೂರಾತಿ ಪತ್ರವನ್ನು, ಮುಖ್ಯಮಂತ್ರಿ ಪರಿಹಾರ ನಿಧಿ ಚೆಕ್, ಪ್ರಾಕೃತಿಕ ವಿಕೋಪ ನಿಧಿ ಚೆಕ್, ವೃದ್ಧಪ್ಯಾ ವೇತನ, ಸಂಧ್ಯಾ ಸುರಕ್ಷಾ, ಮನಸ್ವಿನಿ ಯೋಜನೆ, ಅಂಗವಿಕಲ ವೇತನ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿ ಕೆಲಸಗಳು ನಡೆದಿದ್ದು ಈ ಭಾಗಗಳಲ್ಲಿ ಹೆಚ್ಚಿನ ರಸ್ತೆಗಳು ಗ್ರಾಮೀಣ ಪ್ರದೇಶದ ಹಳ್ಳಿಗಳನ್ನು ಸಂಪರ್ಕಿಸುವ ರಸ್ತೆಗಳಾಗಿದ್ದು 23  ಕೋಟಿ ರೂಗಳ ವೆಚ್ಚದಲ್ಲಿ ಹೆಚ್ಚಿನ ರಸ್ತೆಗಳನ್ನು ಈಗಾಗಲೇ ಅಭಿವೃದ್ಧಿ ಪಡಿಸಲಾಗಿದೆ.

ಅತ್ರಾಡಿ -ಮಂಗಳೂರು ಹಾಗೂ ಉಡುಪಿ -ಸುಬ್ರಮಣ್ಯ ರಾಜ್ಯ ಹೆದ್ದಾರಿ ಕಾಮಗಾರಿಯು  ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಸಾರ್ವಜನಿಕರು ನಮ್ಮೊಂದಿಗೆ ಸಹಕರಿಸುವಂತೆ ವಿನಂತಿಸಿಕೊಂಡರು. ಬೆಳ್ಳೆ ಗ್ರಾಮ ಪಂಚಾಯತ್ ಪ್ರಸ್ತುತ ಅವಧಿಯಲ್ಲಿ ಆಡಳಿತ ವರ್ಗ ಹಾಗೂ ಜನಪ್ರತಿನಿದಿಗಳು ಉತ್ತಮ ರೀತಿಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುತಿದ್ದು ಕ್ಷೇತ್ರಕ್ಕೆ ಮಾದರಿಎಂಬತೆ ಕೆಲಸ ಕಾರ್ಯವನ್ನು ಮಾಡುತ್ತಿದ್ದು ಶ್ಲಾಘನೀಯ ಹಾಗೂ ಈ ಬಾರಿ ಗ್ರಾಮ ಪಂಚಾಯತ್ ಗೆ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು ಶಾಸಕರ ನಿಧಿಯಿಂದ ಸುಮಾರು 10 ಲಕ್ಷ ಅನುದಾನ ನೀಡುವುದಾಗಿ ಹಾಗೂ ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಮೊತ್ತದ ಅನುದಾನ ನೀಡಲಾಗುವುದು ಎಂದರು.

      ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರುಸುಧಾಕರ್ ಪೂಜಾರಿ,  ಉಪಾಧ್ಯಕ್ಷರು ಸಂಧ್ಯಾ ಶೆಟ್ಟಿ, ಕಾಪು ತಹಸೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಕಂದಾಯ ನಿರೀಕ್ಷಕರು ಸುಧೀರ್ ಕುಮಾರ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ , ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯೋಜನಾಧಿಕಾರಿ ಹಾಗೂ ಪಂಚಾಯತ್ ನೋಡೆಲ್ ಅಧಿಕಾರಿ ವೀಣಾ ವಿವೇಕಾನಂದ, ಮೆಸ್ಕಾಂ ಸಹಾಯಕ ಇಂಜಿನಿಯರ್ ಅಜಯ್ ಶೆಟ್ಟಿ, ಗ್ರಾಮ ಲೆಕ್ಕಧಿಕಾರಿ ಪ್ರದೀಪ್ , ಪಂಚಾಯತ್ ರಾಜ್ ಸಹಾಯಕ ಎಂಜಿನಿಯರ್ ಸುಭಾಸ್ ರೆಡ್ಡಿ, ಕೃಷಿ ಅಧಿಕಾರಿ ಶೇಖರ್, ಶಿರ್ವ ಪೊಲೀಸ್ ಉಪನಿರಿಕ್ಷಕರು ರಾಘವೇಂದ್ರ ಸಿ ಹಾಗೂ ಇನ್ನಿತರ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಅಧಿಕಾರಿಗಳು,  ಪ್ರಮುಖರಾದ ರಾಜೇಂದ್ರ ಶೆಟ್ಟಿ, ಹರೀಶ್ ಶೆಟ್ಟಿ, ಶಶಿದರ್ ವಾಗ್ಲೆ, ಗುರುರಾಜ್ ಭಟ್, ಗಣೇಶ್ ಕುಲಾಲ್ ಸಾರ್ವಜನಿಕರು ಹಾಗೂ ವಿವಿಧ ಯೋಜನೆಗಳ ಅರ್ಹ ಫಲಾನುಭವಿಗಳು ಉಪಸ್ಥಿತರಿದ್ದರು


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!