ಮಂಗಳೂರು: ಚೂರಿ ಇರಿದು ಪರಾರಿಯಾದ ತಂಡ : ವ್ಯಕ್ತಿ ಮೃತ್ಯು..!!!
ಮಂಗಳೂರು: ಚೂರಿ ಇರಿದು ಪರಾರಿಯಾದ ತಂಡ : ವ್ಯಕ್ತಿ ಮೃತ್ಯು..!!!

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 4ನೇ ಬ್ಲಾಕ್ ನೈತಂಗಡಿ ಬಳಿ ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತಪಟ್ಟವರನ್ನು ಕೃಷ್ಣಾಪುರ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದೆ..

ಜಲೀಲ್ ಅವರ ಮೇಲೆ ಇಬ್ಬರು ದುಷ್ಕರ್ಮಿಗಳ ತಂಡ ಏಕಾಏಕಿ ದಾಳಿ ಮಾಡಿ ಚೂರಿ ಇರಿದು ಪರಾರಿಯಾಗಿದ್ದು, ಗಂಭೀರ ಗಾಯಗೊಂಡ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!