ಹೊಸ ವರ್ಷದ ನಶೆ ಪಾರ್ಟಿಗೆ ತಂದಿದ್ದ 6 ಕೋಟಿ ಮೌಲ್ಯದ ಡ್ರಗ್ಸ್‌ ವಶ
ಹೊಸ ವರ್ಷದ ನಶೆ ಪಾರ್ಟಿಗೆ ತಂದಿದ್ದ 6 ಕೋಟಿ ಮೌಲ್ಯದ ಡ್ರಗ್ಸ್‌ ವಶ

ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಅಪಾರ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಕಿಂಗ್​ಪಿನ್ ಸೇರಿ ಆರು ಆರೋಪಿಗಳನ್ನು ಬಂಧಿಸಿದ ಸಿಸಿಬಿ 6.30 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಎಂಡಿಎಂಎ, ಚರಸ್, ಗಾಂಜಾ ಸೇರಿ ವಿವಿಧ ಮಾದರಿಯ ಡ್ರಗ್ಸ್ ಜಪ್ತಿ ಮಾಡಲಾಗಿದೆ.

ಹೊಸವರ್ಷಾಚರಣೆ ಹಿನ್ನೆಲೆ ಬೆಂಗಳೂರಿಗೆ ಡ್ರಗ್ಸ್ ಪೂರೈಸಲು ಯತ್ನಿಸುತ್ತಿದ್ದರು. ಹೊಸ ವರ್ಷಾಚರಣೆ ಹಿನ್ನೆಲೆ ಹಲವೆಡೆ ಕಾರ್ಯಾಚರಣೆ ನಡೆಸಿದ್ದೆವು, ಸಿಸಿಬಿ ಪೊಲೀಸರು 6.30 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿಕೆ ನೀಡಿದ್ದಾರೆ.

350 ಎಕ್ಸ್‌ಟಸಿ ಮಾತ್ರೆಗಳು, 2.5 ಕೆ.ಜಿ ಎಂಡಿಎಂಎ, 440 ಗ್ರಾಂ ಚರಸ್, 7 ಕೆ.ಜಿ ಗಾಂಜಾವನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿದೇಶಿ ಪ್ರಜೆ ಸೇರಿ 6 ಡ್ರಗ್ ಪೆಡ್ಲರ್​ಗಳನ್ನು ವಶಕ್ಕೆ ಪಡೆಯಲಾಗಿದೆ, ಗೋವಾದಿಂದ ಬೆಂಗಳೂರಿಗೆ ಡ್ರಗ್ಸ್​, ಗಾಂಜಾ ಪೂರೈಸುತ್ತಿದ್ದ ಮಾಹಿತಿ ಲಭ್ಯವಾಗಿರುವುದಾಗಿ ತಿಳಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!