ಮಂಗಳೂರು: 'ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ನಿಯಮ ಜಾರಿ' - ಕಮಿಷನರ್
'ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ನಿಯಮ ಜಾರಿ' - ಕಮಿಷನರ್

ಮಂಗಳೂರು: ಮಂಗಳೂರು ನಗರದಾದ್ಯಂತ ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ.

ಹೊಸ ವರ್ಷದ ಪಾರ್ಟಿ ಆಯೋಜಿಸುವವರು ಡಿ.31ರಂದು 12:30ಕ್ಕೆ ಕಾರ್ಯಕ್ರಮ ಮುಗಿಸಬೇಕು. ಅನುಮತಿ ಪಡೆದಿದ್ದರೂ ರಾತ್ರಿ 10 ಗಂಟೆಗೆ ಧ್ವನಿವರ್ಧಕಗಳನ್ನು ಬಂದ್ ಮಾಡಬೇಕು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 32 ಚೆಕ್ ಪೋಸ್ಟ್ ಗಳನ್ನು ಹಾಕಲಾಗಿದ್ದು, ಈ ಪೈಕಿ 16 ಚೆಕ್ ಪಾಯಿಂಟ್ ಗಳಿರುತ್ತವೆ. ಅತಿ ವೇಗ, ಅಜಾಗರೂಕತೆಯ ವಾಹನ ಚಾಲನೆಯ ಮೇಲೆ ನಿಗಾ ವಹಿಸಲಾಗುವುದು ಎಂದರು.

ಇನ್ನು ರಾತ್ರಿ 12:30ಕ್ಕೆ ಎಲ್ಲವೂ ಬಂದ್ ಆಗಬೇಕು. ಆ ಬಳಿಕ ಯಾರೂ ರಸ್ತೆಯಲ್ಲಿ ಇರಬಾರದು. ತ್ರಿಬಲ್ ರೈಡಿಂಗ್ ಅಥವಾ ಮದ್ಯಪಾನ ಮಾಡಿ ವಾಹನ ಚಾಲನೆಗೆ ಅವಕಾಶ ಇರುವುದಿಲ್ಲ. ಅದೇರೀತಿ ಬೀಚ್ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಆಯೋಜಿಸಬೇಕು. ಪರವಾನಿಗೆ ಇಲ್ಲದೇ ಯಾವುದೇ ಆಚರಣೆಗೆ ಅವಕಾಶವಿಲ್ಲ ಎಂದಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!