ಮಂಗಳೂರು: ಬಿಳ್ಕೋಡುಗೆ ಕಾರ್ಯಕ್ರಮದ ಉಡುಗೊರೆಗಳನ್ನು ಮರಳಿಸಿ ಪ್ರತಿಭಟಿಸಿದ ನಿವೃತ್ತ ನೌಕರ
ಮಂಗಳೂರು: ಬಿಳ್ಕೋಡುಗೆ ಕಾರ್ಯಕ್ರಮದ ಉಡುಗೊರೆಗಳನ್ನು ಮರಳಿಸಿ ಪ್ರತಿಭಟಿಸಿದ ನಿವೃತ್ತ ನೌಕರ

ಮಂಗಳೂರು : ಪಿಂಚಣಿಗೆ ಸಂಬಂಧಿಸಿದ ದಾಖಲಾತಿಗಳನ್ನು ಸರಕಾರಕ್ಕೆ ಸಲ್ಲಿಸಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಿವೃತ್ತ ಸಿಬ್ಬಂದಿಯೊಬ್ಬರು ತಮ್ಮ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ನೀಡಿದ ಉಡುಗೋರೆಗಳನ್ನು ಮರಳಿಸಿ ತಮ್ಮ ಪ್ರತಿಭಟನೆ ದಾಖಲಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ನಿವೃತ್ತ ಸಹಾಯಕ ಕಾರ್ಯದರ್ಶಿ ಜಿ.ಸದಾನಂದ ಅವರು ತಮ್ಮ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ನೀಡಿದ್ದ ಉಡುಗೊರೆಗಳನ್ನು ಮರಳಿಸುವ ಮೂಲಕ ಪ್ರತಿಭಟಿಸಿದ್ದಾರೆ. ಆಡಳಿತ ಶಾಖೆಯ ಸೂಪರಿಂಟೆಂಡೆಂಟ್‌ ಅವರ ಮೇಜಿನ ಮೇಲೆ ಸದಾನಂದ ಅವರು ಮೈಸೂರು ಪೇಟ, ಹಾರ ಹಾಗೂ ಶಾಲುಗಳನ್ನು ಇಟ್ಟುಹೋದ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. 40 ವರ್ಷ ಸರ್ಕಾರಿ ಸೇವೆ ಸಲ್ಲಿಸಿದ್ದ ಸದಾನಂದ 2022ರ ಅ.31ರಂದು ನಿವೃತ್ತರಾಗಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಆಡಳಿತ ವಿಭಾಗದಿಂದ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಗಿತ್ತು. ‘ಸದಾನಂದ ಅವರು ಪಿಂಚಣಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ತ್ವರಿತವಾಗಿ ಮಾಡಿಕೊಡುವಂತೆ ಕೋರಲು 2022ರ ನವೆಂಬರ್‌ನಿಂದ ಪದೇ ಪದೇ ಕಚೇರಿಗೆ ಭೇಟಿ ನೀಡಿದ್ದರು. ಪಿಂಚಣಿಗೆ ಸಂಬಂಧಿಸಿದ ದಾಖಲಾತಿಗಳನ್ನು ಸರ್ಕಾರಕ್ಕೆ ಸಲ್ಲಿಸುವ ವಿಚಾರದಲ್ಲಿ ವಿಳಂಬ ಆಗಿರುವುದರಿಂದ ತೀವ್ರ ನೊಂದಿದ್ದರು. ಹೀಗಾಗಿ ಬೇಸರದಿಂದ ಉಡುಗೊರೆಗಳನ್ನು ಮರಳಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!