ಮಂಗಳೂರು: ಮಾದಕ ವಸ್ತು ಪ್ರಕರಣ - ಪ್ರತ್ಯೇಕ ಘಟನೆ; ಮೂವರ ಬಂಧನ
ಮಂಗಳೂರು: ಮಾದಕ ವಸ್ತು ಪ್ರಕರಣ - ಪ್ರತ್ಯೇಕ ಘಟನೆ; ಮೂವರ ಬಂಧನ

ಮಂಗಳೂರು: ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರತ್ಯೇಕ ಘಟನೆಯಲ್ಲಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತರನ್ನು ನೀಲ್ ಕಿಶೋರಿಲಾಲ್ ರಾಮ್ ಜಿ ಶಾ(38), ನವಾಝ್ (35), ಕಿರಣ್ ರಾಜ್ ಶೆಟ್ಟಿ (24) ಎಂದು ಗುರುತಿಸಲಾಗಿದೆ.

ನೀಲ್ ಕಿಶೋರಿಲಾಲ್ ರಾಮ್ ಜಿ ಶಾ:

ಈತ ಸಾಗರೋತ್ತರ ಭಾರತೀಯ ಪ್ರಜೆಯಾಗಿದ್ದು, ನಗರದ ಫ್ಲಾಟ್ ವೊಂದರಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ರವರ ನೇತೃತ್ವದ ಸಿಸಿಬಿ ಪೊಲೀಸರು ಗಾಂಜಾವನ್ನು ಹೊಂದಿದ್ದ ಫ್ಲಾಟಿಗೆ ದಾಳಿ ನಡೆಸಿ ಒಟ್ಟು 2 ಕೆ ಜಿ ತೂಕದ ರೂ. 50,000 ಮೌಲ್ಯದ ಗಾಂಜಾ, 2 ಮೊಬೈಲ್ ಫೋನ್, ನಗದು ರೂ 7000 ಡಿಜಿಟಲ್ ತೂಕ ಮಾಪನ ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ 78,000 ಎಂದು ಆಂದಾಜಿಸಲಾಗಿದೆ.

 

ನವಾಝ್:

ಮಾದಕ ವಸ್ತುವಾದ ಎಂಡಿಡಂಎಯನ್ನು ಹೊಂದಿಕೊಂಡು ಕೇರಳ-ಕರ್ನಾಟಕದ ಗಡಿಭಾಗದಲ್ಲಿ ಮಾರಾಟ ಮಾಡುತ್ತಿದ್ದ ನವಾಝ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದದು, ಈತ ಕೇರಳದ ಗಡಿಭಾಗ ಹಾಗೂ ಮುಡಿಪು ಪರಿಸರದಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ರವರ ನೇತೃತ್ವದಲ್ಲಿ ದಾಳಿ ನಡೆಸಿ ಒಟ್ಟು 15 ಗ್ರಾಂ ತೂಕದ ರೂ. 75,000 ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು, ಮೊಬೈಲ್ ಫೋನ್ -2, ಡಿಜಿಟಲ್ ತೂಕ ಮಾಪನ, ನಗದು ರೂ. 3200 ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಬಜಾಜ್ ಅವೆಂಜರ್ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.

ನವಾಝ್ ನ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆಯತ್ನ, ದರೋಡೆಗೆ ಸಂಬಂಧಪಟ್ಟಂತೆ ಒಟ್ಟು 8 ಪ್ರಕರಣಗಳು, ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ , ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಯತ್ನ ನಡೆಸಿದ ಪ್ರಕರಣ ಹೀಗೆ ಒಟ್ಟು 11 ಪ್ರಕರಣಗಳು ದಾಖಲಾಗಿದೆ.

 

ಕಿರಣ್ ರಾಜ್ ಶೆಟ್ಟಿ:

ಬೃಹತ್ ಪ್ರಮಾಣದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾ ಪತ್ತೆ ಹಚ್ಚಿ ಕಿರಣ್ ರಾಜ್ ಶೆಟ್ಟಿಯನ್ನು ಸೆರೆ ಹಿಡಿದಿದ್ದಾರೆ. ಈತ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಾರುತಿ ಅಲ್ಟೋ 800 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದದ್ದು, ಆತನಿಂದ 27.100 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇನ್ನು ಮಂಗಳೂರು ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಾರುತಿ ಅಲ್ಟೋ 800 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ರಾಜೇಂದ್ರ ಬಿ ನೇತೃತ್ವದ ಸಿಸಿಬಿ ಪೊಲೀಸರು ನೀರುಮಾರ್ಗದ ಕುಟ್ಟಿಕಳ ಎಂಬಲ್ಲಿ ಪತ್ತೆ ಹಚ್ಚಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಕಿರಣ್ ರಾಜ್ ಶೆಟ್ಟಿಯನ್ನು ಬಂಧಿಸಿದ್ದಾರೆ.

ಆರೋಪಿಯ ವಶದಲ್ಲಿದ್ದ ಮಾರುತಿ ಅಲ್ಟೋ 800 ಕಾರನ್ನು ಸ್ವಾಧೀನಪಡಿಸಿಕೊಂಡು ಅದರಲ್ಲಿ ಸಾಗಾಟ ಮಾಡುತ್ತಿದ್ದ 27.100 ಕೆಜಿ ಗಾಂಜಾವನ್ನು, ಮೊಬೈಲ್ ಫೋನ್, ನಗದು ರೂ. 1500/- ಸ್ವಾಧೀನಪಡಿಸಿಕೊಳ್ಳಲಾಗಿದೆ.

ಆರೋಪಿ ಕಿರಣ್ ರಾಜ್ ಶೆಟ್ಟಿಯ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!