ಮಂಗಳೂರು ವಿಮಾನ ನಿಲ್ದಾಣದ ಬಳಕೆದಾರರ ಅಭಿವೃದ್ದಿ ಶುಲ್ಕ ಏರಿಕೆ…!!
ಮಂಗಳೂರು ವಿಮಾನ ನಿಲ್ದಾಣದ ಬಳಕೆದಾರರ ಅಭಿವೃದ್ದಿ ಶುಲ್ಕ ಏರಿಕೆ…!!

ಮಂಗಳೂರು: ಫೆಬ್ರವರಿ 1 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲಾ ಪ್ರಯಾಣಿಕರು ಇನ್ನು ಮುಂದೆ ಬಳಕೆದಾರರ ಅಭಿವೃದ್ಧಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಸದ್ಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಯುಡಿಎಫ್‌ ಅನ್ನು ನಿರ್ಗಮನ ಪ್ರಯಾಣಿಕರು ಮಾತ್ರ ಪಾವತಿಸುತ್ತಿದ್ದಾರೆ. ಆದರೆ, ಫೆಬ್ರವರಿಯಿಂದ ಆಗಮನ ಪ್ರಯಾಣಿಕರು ಕೂಡ ಈ ಶುಲ್ಕ ಪಾವತಿಸಬೇಕಿದೆ.

ಎಪ್ರಿಲ್‌ನಿಂದ ದೇಶೀಯ ನಿರ್ಗಮನ ಪ್ರಯಾಣಿಕರು 150 ರೂ. ಬದಲು 560 ರೂ. ಪಾವತಿಸಬೇಕು. ಈ ಶುಲ್ಕ ಪ್ರತೀ ವರ್ಷ ಏರಲಿದೆ. ಅಂತರಾಷ್ಟ್ರೀಯ ನಿರ್ಗಮನ ಪ್ರಯಾಣಿಕರು ಈಗ 825 ಪಾವತಿಸುತ್ತಿದ್ದರೆ ಈ ಶುಲ್ಕ ಎಪ್ರಿಲ್‌ನಿಂದ 1,105 ಆಗಲಿದ್ದು, ಮುಂದಿನ ವರ್ಷ ಮತ್ತೆ ಏರಲಿದೆ. ಆಗಮನ ದೇಶೀಯ ಪ್ರಯಾಣಿಕರು ಎಪ್ರಿಲ್‌ನಿಂದ ಮೊದಲ ಬಾರಿಗೆ 150 ರೂ. ಶುಲ್ಕ ಪಾವತಿಸಲಿದ್ದು, ಮುಂದಿನ ವರ್ಷ ಮಾರ್ಚ್‌ ಬಳಿ ಕ 240 ಪಾವತಿಸಬೇಕಾಗಿದೆ.

ಈ ಮಧ್ಯೆ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಈಗಿರುವ ದರವು ಫೆಬ್ರವರಿ ಹಾಗೂ ಮಾರ್ಚ್‌ಗೆ ಮಾತ್ರ ಅನ್ವಯವಾಗುವಂತೆ 80 ರೂ. ಇಳಿಕೆಯಾಗಲಿದ್ದು, ಎಪ್ರಿಲ್‌ನಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!