ಎವರೆಸ್ಟ್ ಬೇಸ್ ಕ್ಯಾಂಪ್ ಮೇಲೆ ತುಳುನಾಡ ಬಾವುಟ ಹಾರಿಸಿದ ಉಡುಪಿಯ ಯುವಕ
ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್‌ನ ಮೇಲೆ ತುಳು ಧ್ವಜ ಹಾರಾಟ

ಉಡುಪಿ: ಉತ್ತಮ ವೇತನ ಬರುತ್ತಿದ್ದ ಸಾಫ್ಟ್ ವೇರ್ ಕೆಲಸವನ್ನು ಬಿಟ್ಟ ಯುವಕನೊಬ್ಬ ಸುಮಾರು 18ಸಾವಿರಕ್ಕೂ ಅಧಿಕ ಕಿ.ಮೀ ಪ್ರಯಾಣವನ್ನು ತನ್ನ ಬೈಕಿನಲ್ಲಿಯೇ ಏಕಾಂಗಿಯಾಗಿ ಮುಗಿಸಿ ತುಳುನಾಡಿನ ಧ್ವಜವನ್ನು ವಿಶ್ವದ ಅತೀ ಎತ್ತರದ ಉಮ್ಲಿಂಗ್ ಲಾ ಮತ್ತು ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್ ನ ಮೇಲೆ ಹಾರಿಸಿ ಬಂದಿದ್ದಾರೆ.

ಉಡುಪಿಯ ಸುರೇಶ್ ಕೃಷ್ಣ ಶೆಟ್ಟಿ ಮತ್ತು ಸುಜಯ ಎಸ್ ಶೆಟ್ಟಿ ದಂಪತಿಯ ಪುತ್ರನಾಗಿರುವ ಸಿದ್ವೀನ್ ಶೆಟ್ಟಿ (28)  ಚಿಕ್ಕಂದಿನಿಂದಲೇ ಚಾರಣದ ಬಗ್ಗೆ ವಿಶೇಷ ಆಸಕ್ತಿ ಹೊಂದಿದವರಾಗಿದ್ದಾರೆ. ಟ್ರೆಕ್ಕಿಂಗ್ ಪ್ರೇಮಿಯಾಗಿರುವ ಇವರು 2023 ರ ಮೇ 6 ರಂದು ಉಡುಪಿಯಿಂದ ತನ್ನ ಹಿಮಾಲಯನ್ ಬೈಕ್ ನಲ್ಲಿ ಪ್ರಯಾಣ ಆರಂಭಿಸಿ ಭಾರತ, ನೇಪಾಳ ಮತ್ತು ಭೂತಾನ್ ದೇಶಗಳನ್ನು ಸುತ್ತಿದ್ದು, ಭಾರತದ 21 ರಾಜ್ಯಗಳು, 5 ಕೇಂದ್ರಾಡಳಿತ ಪ್ರದೇಶಗಳನ್ನು ಸುತ್ತಿ ಉಡುಪಿಗೆ ವಾಪಾಸಾಗಿದ್ದಾರೆ.

ಇದರೊಂದಿಗೆ ವಿಶ್ವದ ಅತೀ ಎತ್ತರದ ಪ್ರದೇಶವಾದ ಉಮ್ಲಿಂಗ್ ಲಾ, ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್ ಮತ್ತು ವಿಶ್ವದ ಅತೀ ಎತ್ತರದ ಶಿವ ದೇವಾಲಯ ತುಂಗನಾಥ್ ಅನ್ನು ಕೂಡ ಸ್ಪರ್ಶಿಸಿ ಬಂದಿದ್ದಾರೆ.

ಚಾರಣದೊಂದಿಗೆ ಇಡೀ ದೇಶವನ್ನು ಸುತ್ತಿ ಅಲ್ಲಿನ ಶಿವ ದೇವಾಲಯಗಳನ್ನು ಸಂದರ್ಶಿಸಬೇಕು ಎನ್ನುವುದು ಅವರ ಆಸೆಯಾಗಿತ್ತು. ಅದರೊಂದಿಗೆ ತುಳುನಾಡಿನ ಧ್ವಜವನ್ನು ವಿಶ್ವದ ಎತ್ತರದ ಪ್ರದೇಶದಲ್ಲಿ ಇದುವರೆಗೆ ಉಡುಪಿಯ ಯಾವುದೇ ಚಾರಣಿಗರು ಹಾರಿಸಿಲ್ಲ. ಈ ಸಾಧನೆಯನ್ನು ತಾನು ಮಾಡಬೇಕು ಎನ್ನುವ ಆಸೆಯಿಂದ ಕಠಿಣ ಪರಿಶ್ರಮದೊಂದಿಗೆ ಸಿಧ್ವೀನ್ ಶೆಟ್ಟಿಯವರು ತನ್ನ ಕನಸನ್ನು ಕೊನೆಗೂ ನನಸು ಮಾಡಿಕೊಂಡಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!