77ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ
77ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ

ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 77ನೇ ಸ್ವಾತಂತ್ರ್ಯ ದಿನದಂದು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ಬಳಿಕ ಕೆಂಪು ಕೋಟೆ ಕಡೆ ಆಗಮಿಸಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.

ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ಮಾಡಿದ ನಂತರ ಐಎಎಫ್ ಹೆಲಿಕಾಪ್ಟರ್ ಪುಷ್ಪವೃಷ್ಟಿ ಮಾಡಿತು.

PM Modi says 'country is with Manipur' on 77th Independence Day | Top  points - India Today

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕೊಡುಗೆ ನೀಡಿದ ಎಲ್ಲಾ ಕೆಚ್ಚೆದೆಯ ಹೃದಯಗಳಿಗೆ ನಾನು ಗೌರವವನ್ನು ಸಲ್ಲಿಸುತ್ತೇನೆ ಎಂದ ಅವರು, ಮಣಿಪುರದಲ್ಲಿ ಶಾಂತಿ ನೆಲೆಸಬೇಕು ಎಂದು ಕೆಂಪು ಕೋಟೆಯಿಂದ ಮಾಡಿದ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಮನವಿ ಮಾಡಿದರು.

ಸುಧಾರಣೆ, ಸಾಧನೆ ಮತ್ತು ಪರಿವರ್ತನೆ ದೇಶವನ್ನು ಬದಲಾಯಿಸುತ್ತಿವೆ. 2014ರಲ್ಲಿ ನಾವು ಅಧಿಕಾರಕ್ಕೆ ಬಂದಾಗ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ 10ನೇ ಸ್ಥಾನದಲ್ಲಿದ್ದೆವು.

ಇಂದು 140 ಕೋಟಿ ಭಾರತೀಯರ ಶ್ರಮದಿಂದ ಐದನೇ ಸ್ಥಾನಕ್ಕೆ ತಲುಪಿದ್ದೇವೆ. ಇದು ಏಕಾಏಕಿ ಸಾಧ್ಯವಾಗಲಿಲ್ಲ. ದೇಶವನ್ನು ತನ್ನ ಕಪಿಮುಷ್ಠಿಯಲ್ಲಿ ಹಿಡಿದಿದ್ದ ಭ್ರಷ್ಟಾಚಾರದ ರಾಕ್ಷಸನನ್ನು ಹೊಡೆದೋಡಿಸಿದ್ದೇವೆ. ನಾವು ಸೋರಿಕೆಯನ್ನು ನಿಲ್ಲಿಸಿದ್ದೇವೆ ಮತ್ತು ಬಲವಾದ ಆರ್ಥಿಕತೆಯನ್ನು ರೂಪಿಸಿದ್ದೇವೆ ಎಂದು ಅವರು ಹೇಳಿದರು.

ಇನ್ನು 10 ನೇ ಬಾರಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಧ್ವಜಾರೋಹಣ ಮಾಡಿದ್ದು, ಕೆಂಪುಕೋಟೆ ತಲುಪಿದ ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ ಗಿರಿಧರ್ ಆರಾಮ್ನೆ ಸ್ವಾಗತಿಸಿದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!