ಮತ್ತೆ ನಿಫಾ ವೈರಸ್‌ -  ಇಬ್ಬರ ಸಾವು.!
ನಿಫಾ ಸೋಂಕಿಗೆ ಕೇರಳದಲ್ಲಿ ಇಬ್ಬರು ಸಾವು ಶಂಕೆ

ನಿಫಾ ಸೋಂಕಿಗೆ ಕೋಝಿಕ್ಕೋಡ್‌ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಜಿಲ್ಲೆಯಾದ್ಯಂತ ಹೈ ಅಲರ್ಟ್‌ ಘೋಷಿಸಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್‌ ತಿಳಿಸಿದ್ದಾರೆ.

4 ವರ್ಷಗಳ ಬಳಿಕ ಇದೀಗ ಕೇರಳದಲ್ಲಿ ಮತ್ತೆ ನಿಫಾ ವೈರಸ್‌ನ ಆತಂಕ ಎದುರಾಗಿದೆ. ಇಲ್ಲಿನ ಕೋಝಿಕ್ಕೋಡ್‌ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳು ಜ್ವರದಿಂದ ಮೃತಪಟ್ಟಿದ್ದು,ಇದನ್ನು ಕೇರಳ ಆರೋಗ್ಯ ಇಲಾಖೆ "ಅಸ್ವಾಭಾವಿಕ" ಎಂದು ವಿವರಿಸಿದ್ದು ಬಳಿಕ ಜಿಲ್ಲೆಯಲ್ಲಿ ಆರೋಗ್ಯ ಎಚ್ಚರಿಕೆ ಘೋಷಿಸಿದೆ.

nipah virus Archives - OK Telugu

ಮೃತ ವ್ಯಕ್ತಿಗಳಲ್ಲಿ ಒಬ್ಬರ ಸಂಬಂಧಿಕರನ್ನು ಸಹ ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಇದು ಬಾವಲಿ ಜ್ವರ ಅಥವಾ ನಿಫಾ ವೈರಸ್‌ ಇರಬಹುದೆಂದು ವೈದ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಎಚ್ಚರಿಸಿದ್ದು, ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

2018ರಲ್ಲಿ ದೇಶದಲ್ಲೇ ಮೊದಲ ಬಾರಿಗೆ ಇದೇ ಜಿಲ್ಲೆಯಲ್ಲಿ ನಿಫಾ ವೈರಸ್‌ನಿಂದ ಸಾವು ಸಂಭವಿಸಿತ್ತು. 2021ರಲ್ಲಿ ಮತ್ತೆ ಕಾಣಿಸಿಕೊಂಡಿತ್ತು. ಪಿಟಿಐ ವರದಿಯಂತೆ, ಈ ಘಟನೆ ಕೇರಳ ಆರೋಗ್ಯ ಇಲಾಖೆಯ ಗಮನಕ್ಕೆ ಬರುತ್ತಿದ್ದಂತೆಯೇ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಸೋಮವಾರ ಪರಿಸ್ಥಿತಿಯನ್ನು ನಿರ್ಣಯಿಸಲು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!