ಸತ್ಯಜಿತ್ ಸುರತ್ಕಲ್ ಗೆ ಲೋಕಸಭೆ ಟಿಕೆಟ್ ನೀಡಲು ಒತ್ತಾಯಿಸಿ ಜನಾಗ್ರಹ ಸಮಾವೇಶ
ಟೀಂ ಸತ್ಯಜಿತ್ ಸುರತ್ಕಲ್ - "ಜನಾಗ್ರಹ ಸಮಾವೇಶ"

ಮಂಗಳೂರು: ಹಿಂದೂ ಸಂಘಟನೆಯ ಮಾಜಿ ಮುಖಂಡ ಸತ್ಯಜಿತ್ ಸುರತ್ಕಲ್ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದ.ಕ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ತುಂಬೆಯ ಬಂಟರ ಭವನದಲ್ಲಿ ಜನಾಗ್ರಹ ಸಮಾವೇಶ ನಡೆಯಿತಿದ್ದು, ಜನಸಾಗರವೇ ಹರಿದುಬಂದಿದೆ.

ಸತ್ಯಜಿತ್ ಹಿಂದುತ್ವ, ಸಮಾಜಕ್ಕಾಗಿ 37 ವರ್ಷಗಳನ್ನು ತ್ಯಾಗ ಮಾಡಿದ್ದಾರೆ. ಅದಕ್ಕಾಗಿ ಅವರಿಗೆ ಅವಕಾಶ ನೀಡಬೇಕು ಎನ್ನುವುದು ಕಾರ್ಯಕರ್ತರ ಅಗ್ರಹವಾಗಿದ್ದು, ಟೀಂ ಸತ್ಯಜಿತ್ ಸುರತ್ಕಲ್ ಬೃಹತ್ ಸಂಖ್ಯೆಯಲ್ಲಿ ಸೇರಿದೆ.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಗುವ ಪೂರ್ಣ ವಿಶ್ವಾಸವಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿಯ ಟಿಕೆಟ್ ಆಕಾಂಕ್ಷಿ, ಹಿಂದೂ ಪರ ಹೋರಾಟಗಾರ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ.

ಕಳೆದ 37 ವರ್ಷಗಳಿಂದ ಹಿಂದೂ ಸಂಘಟನೆಯಲ್ಲಿ ಕಾರ್ಯಕರ್ತರಲ್ಲಿ ಒಬ್ಬನಾಗಿ ದುಡಿದಿದ್ದೇನೆ, ಕಾರ್ಯಕರ್ತರನ್ನು ಬಿಟ್ಟು ಸತ್ಯಜಿತ್ ಇಲ್ಲ. ಸಂಘಟನೆಯ ಹೋರಾಟದಲ್ಲಿ ಕಾರ್ಯಕರ್ತರ ಧ್ವನಿಯಾಗಿ ಕೆಲಸವನ್ನು ಮಾಡಿದ್ದೇನೆ. ಇದರಿಂದ ಇಂದು ನಾನು ಈ ಹಂತಕ್ಕೆ ಬಂದಿದ್ದೇನೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನನಗೆ ಚುನಾವಣೆಯಲ್ಲಿ ನಿಲ್ಲುವ ಭರವಸೆ ನೀಡಿದ್ದರು. ಕಳೆದ 5 ವರ್ಷದಿಂದ ಅವರಿಂದ ಯಾವುದೇ ಮಾತಿಲ್ಲ. ನನಗೆ ವೈಯಕ್ತಿಕವಾಗಿ ಯಾವುದೂ ಬೇಡ. ಈಗ ನಾನು ರಾಜಕೀಯ ಮತ್ತು ಸಾಮಾಜಿಕ ಬಲಿದಾನಕ್ಕೆ ಸಿದ್ಧನಾಗಿದ್ದೇನೆ ಎಂದು ತಿಳಿಸಿದರು ಕಾರ್ಯಕರ್ತರ ಇಚ್ಛೆಗೆ ವಿರುದ್ಧವಾಗಿ ಯಾವತ್ತೂ ಹೋಗುವುದಿಲ್ಲ. ಟಿಕೆಟ್ ಘೋಷಣೆಯಾಗುವ ತನಕ ಕಾರ್ಯಕರ್ತರೊಂದಿಗೆ ಹೋರಾಟ ನಡೆಸುತ್ತೇನೆ. ನನಗೆ ಟಿಕೆಟ್ ಸಿಗುವ ಪೂರ್ಣ ವಿಶ್ವಾಸ ಇದೆ. ನನ್ನ ತಂಡದ ಎಲ್ಲರಿಗೂ ವಿಶ್ವಾಸ ಇದೆ. ಅಕಸ್ಮಾತ್ ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರ ಅಪೇಕ್ಷೆಯಂತೆ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದರು. 37 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಹಿಂದುತ್ವಕೋಸ್ಕರ ಕೆಲಸ ಮಾಡಿದ್ದೇನೆ. ನನ್ನಷ್ಟು ಕೆಲಸ ಮಾಡಿದವರು ಯಾರೂ ಇಲ್ಲ ಎಂದು ಅಭಿಮಾನದಿಂದ ಹೇಳುತ್ತಿದ್ದೇನೆ ಎಂದು ಹೇಳಿದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!