India T20 Squad: ಟಿ20 ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಪ್ರಕಟ
India T20 Squad: ಟಿ20 ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಪ್ರಕಟ
 
ಜೂನ್ 1 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಿದ್ದಾರೆ. ಹಾಗೆಯೆ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ರಿಷಭ್ ಪಂತ್ ಕಾಣಿಸಿಕೊಂಡಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿ ಸಿಎಸ್​ಕೆ ಪರ ಭರ್ಜರಿ ಪ್ರದರ್ಶನ ನೀಡಿರುವ ಶಿವಂ ದುಬೆಗೂ ತಂಡದಲ್ಲಿ ಸ್ಥಾನ ಲಭಿಸಿದೆ.
 
ಮತ್ತೊಂದೆಡೆ ಶುಭ್​ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಹಾಗೂ ಅವೇಶ್ ಖಾನ್​ ಅವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ. ಅಂದರೆ 15 ಸದಸ್ಯರ ತಂಡದಿಂದ ಯಾರಾದರು ಹೊರಬಿದ್ದರೆ ಈ ನಾಲ್ವರು ಆಟಗಾರರಿಂದ ಒಬ್ಬರನ್ನು ಆಯ್ಕೆ ಮಾಡಲಾಗುತ್ತದೆ.
 
 
ಹಾಗೆಯೇ ಈ ಬಾರಿಯ ಐಪಿಎಲ್​ನಲ್ಲಿ ವೇಗದ ಬೌಲಿಂಗ್​ನೊಂದಿಗೆ ಮಿಂಚಿದ್ದ​ ಮಯಾಂಕ್ ಯಾದವ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಬದಲಾಗಿ ವೇಗಿಗಳಾಗಿ ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ಹಾಗೂ ಜಸ್​ಪ್ರೀತ್ ಬುಮ್ರಾಗೆ ಸ್ಥಾನ ನೀಡಲಾಗಿದೆ.
 
ಭಾರತ ಟಿ20 ವಿಶ್ವಕಪ್​ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.
 
 
 
 

You may also like

Comments

https://newsdaksha.online/assets/images/user-avatar-s.jpg

0 comment

Write the first comment for this!