ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಬೈಕ್, ಆಟೋ ನಿಷೇಧ.!
ಬೆಂಗಳೂರು - ಮೈಸೂರು ದಶಪಥ ಹೆದ್ದಾರಿಯಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರ ನಿಷೇಧ

 ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರ ಆ.1ರಿಂದ ನಿಷೇಧಿಸಲಾಗಿದ್ದು, ನಿಯಮವನ್ನು ಉಲ್ಲಂಘಿಸಿದರೆ 500ರೂ. ದಂಡ ವಿಧಿಸಲಾಗುತ್ತದೆ.

ರಾಜ್ಯದ ಏಕೈಕ ಎಕ್ಸ್‌ಪ್ರೆಸ್‌ ವೇ ಆಗಿರುವ ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ಆ.1ರಿಂದ ಅಂದರೆ ನಾಳೆಯಿಂದ ಎಲ್ಲಾ ಮಾದರಿಯ ದ್ವಿಚಕ್ರ ವಾಹನ (ಬೈಕ್‌ಗಳು) ಹಾಗೂ ತ್ರಿಚಕ್ರ ವಾಹನ (ಆಟೋಗಳು) ಹಾಗೂ ಟ್ರ್ಯಾಕ್ಟರ್‌ ಸೇರಿ ಕಡಿಮೆ ವೇಗ ಸಾಮಥ್ರ್ಯದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಈ ನಿಯಮವನ್ನು ಉಲ್ಲಂಘಿಸಿ ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ಸಂಚಾರ ಮಾಡಿದರೆ 500 ರೂ. ದಂಡವನ್ನು ವಿಧಿಸಲಾಗುವುದು ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!